ಒಡಿಯಾ ರಾಪರ್ ಅಭಿನವ್ ಸಿಂಗ್ ಬೆಂಗಳೂರಿನ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ. ಬೆಂಗಳೂರಿನ ಕಾಡು ಹೊಸಹಳ್ಳಿಯ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ಅಭಿನವ್ ಸಿಂಗ್ ಶವವಾಗಿ ಪತ್ತೆಯಾಗಿದ್ದಾರೆ.
ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ಕುಟುಂಬಸ್ಥರು ಹೇಳಿದ್ದಾರೆ. ಮಾಹಿತಿ ಪ್ರಕಾರ, ಅವರು ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ವಿಷ ಸೇವಿಸಿದ್ದಾರೆ. ಪತ್ನಿಯಿಂದಾಗಿ ಆತ ಒತ್ತಡಕ್ಕೆ ಒಳಗಾಗಿದ್ದ ಎಂದು ಆತನ ಕುಟುಂಬಸ್ಥರು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಬೆಂಗಳೂರಿನ ಹೊಸ ಕಂಪನಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದ ಅವರು ಸೋಮವಾರ ಶವವಾಗಿ ಪತ್ತೆಯಾಗಿದ್ದರು.
ಮಂಗಳವಾರ ಅವರ ಪಾರ್ಥಿವ ಶರೀರವನ್ನು ಕಟಕ್‌ನಲ್ಲಿರುವ ಅವರ ನಿವಾಸಕ್ಕೆ ಕಳುಹಿಸಲಾಯಿತು.