ಯಶ್ ಬಗ್ಗೆ ಏನೋ ಹೇಳಿ ಸಿಕ್ಕಿಹಾಕಿಕೊಂಡರಾ ರಶ್ಮಿಕಾ ಮಂದಣ್ಣ?

Webdunia
ಸೋಮವಾರ, 26 ಜೂನ್ 2017 (13:11 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಕೊಂಚ ವಿವಾದಾತ್ಮಕವಾಗಿ ಹೇಳಿಕೆ ನೀಡಿ ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗಷ್ಟೇ ಬಹುಬೇಡಿಕೆಯ ನಟಿಯಾಗಿ ಹೊರ ಹೊಮ್ಮುತ್ತಿರುವ ರಶ್ಮಿಕಾ ಮಂದಣ್ಣ ಸಂಕಟಕ್ಕೆ ಸಿಲುಕಿದ್ದಾರೆ.

 
ಕಾರ್ಯಕ್ರಮವೊಂದರಲ್ಲಿ ನಿರೂಪಕ ಕೇಳಿದ ಕಿರಿಕ್ ಪ್ರಶ್ನೆಗೆ ಯಶ್ ರನ್ನು ಮಿ. ಶೋ ಅಫ್ ಎಂದಿದ್ದರು ರಶ್ಮಿಕಾ. ಆ ಒಂದು ಮಾತು ಯಶ್ ಅಭಿಮಾನಿಗಳನ್ನು ರೊಚ್ಚಿಗೆಬ್ಬಿಸಿತ್ತು. ಯಶ್ ಬಗ್ಗೆ ಏನೋ ಹೇಳಲು ಹೋಗಿ ರಶ್ಮಿಕಾ ಪೇಚಿಗೆ ಸಿಲುಕಿಕೊಂಡರು.

ಇದೀಗ ಅಭಿಮಾನಿಗಳನ್ನು ಸಮಾಧಾನಿಸಲು ಸ್ವತಃ ಯಶ್ ಫೇಸ್ ಬುಕ್ ಪುಟದಲ್ಲಿ ಹೇಳಿಕೆ ನೀಡಿದ್ದಾರೆ. ‘ನಿಮ್ಮ ಪ್ರೀತಿಗೆ ನಾನು ಚಿರ ಋಣಿ. ಕೆಲವೊಮ್ಮೆ ಅನಗತ್ಯ ವಿವಾದಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ನಿಮಗೆ ನೋವಾದಾಗ ನಾನು ಪ್ರತಿಕ್ರಿಯಿಸದೇ ಇರಲು ಸಾಧ್ಯವಿಲ್ಲ.

ನನಗೆ ರಶ್ಮಿಕಾ ವೈಯಕ್ತಿಕವಾಗಿ ಪರಿಚಿತರಲ್ಲ. ಹಾಗಂತ ಅವರಿಗೆ ನನ್ನ ಮೇಲೆ ಅಭಿಪ್ರಾಯವಿರಬಾರದು ಎಂದಿಲ್ಲ. ಅವರ ಅಭಿಪ್ರಾಯ ಅವರದು. ಅದನ್ನು ಹೀಗೆಳೆಯುವ ಕೆಲಸ ಮಾಡಬೇಕಿಲ್ಲ. ಅವರ ಅಭಿಪ್ರಾಯವನ್ನು ಗೌರವಿಸೋಣ. ಇದನ್ನು ಇಲ್ಲಿಗೇ ಬಿಟ್ಟು ಬಿಡಿ. ದೊಡ್ಡದು ಮಾಡಬೇಡಿ’ ಎಂದು ಯಶ್ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಅಭಿಮಾನಿಗಳು ಯಶ್ ಮಾತಿಗೆ ಬೆಲೆ ಕೊಟ್ಟು ಸುಮ್ಮನಾಗುತ್ತಾ? ನೋಡೋಣ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮುಂದಿನ ಸುದ್ದಿ
Show comments