ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಸಾವಿಗೆ ಆಕ್ರೋಶ ವ್ಯಕ್ತಪಡಿಸಿದ ನಟಿ ರಶ್ಮಿಕಾ ಮಂದಣ್ಣ

ಶನಿವಾರ, 20 ಏಪ್ರಿಲ್ 2019 (06:37 IST)
ಬೆಂಗಳೂರು: ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ನಿಗೂಢ ಸಾವಿನ ಪ್ರಕರಣ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಮಾಡುತ್ತಿದೆ.

 
ಜಸ್ಟಿಸ್ ಫಾರ್ ಮಧು ಹ್ಯಾಶ್ ಟ್ಯಾಗ್ ನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿರುವ ಮಧು ಏಪ್ರಿಲ್ 13 ರಂದು ಪರೀಕ್ಷೆ ಬರೆಯಲು ಹೋದವಳು ಎರಡು ದಿನದ ಬಳಿಕ ಕಾಲೇಜಿನಿಂದ ಸ್ವಲ್ಪ ದೂರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಓರ್ವನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇದೀಗ ಮಧು ಸಾವಿನ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಟ್ವೀಟ್ ಮಾಡಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.  ‘ಎಲ್ಲಿದೆ ಮನುಷ್ಯತ್ವ? ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಅತ್ಯಾಚಾರಕ್ಕೊಳಗಾಗಿ ಕೊಲೆ ಮಾಡಲಾಗಿದೆ. ಇದು ನಿಜಕ್ಕೂ ಹೃದಯ ವಿದ್ರಾವಕ. ಇಂತಹ ಘಟನೆಗಳು ಕೊನೆಗೊಳ್ಳಲು ಇನ್ನೆಷ್ಟು ಘಟನೆಗಳು ನಡೆಯಬೇಕು? ಮಧುಗೆ ನ್ಯಾಯ ಸಿಗುತ್ತದೆ ಮತ್ತು ಇಂತಹ ಪ್ರಕರಣಗಳು ಕೊನೆಗೊಳ್ಳಬಹುದು ಎಂದು ಆಶಿಸುತ್ತೇನೆ’ ಎಂದು ರಶ್ಮಿಕಾ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ವೀಕೆಂಡ್ ವಿತ್ ರಮೇಶ್ ಸಾಧಕರ ಸೀಟ್ ಗೆ ರಾಹುಲ್ ದ್ರಾವಿಡ್ ಕರೆತರಲು ಅಭಿಯಾನ ಶುರು