ನೋವು ಕೊಟ್ಟವರ ಬಗ್ಗೆ ಮೌನ ಮುರಿದ ರಶ್ಮಿಕಾ ಮಂದಣ್ಣ

Webdunia
ಬುಧವಾರ, 9 ನವೆಂಬರ್ 2022 (10:14 IST)
Photo Courtesy: Twitter
ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ಎಷ್ಟೇ ಹಿಟ್ ಸಿನಿಮಾಗಳನ್ನು ಕೊಟ್ಟರೂ ಕೆಲವು ವರ್ಗದ ಜನ ಅವರನ್ನು ಸೋಷಿಯಲ್ ಮೀಡಿಯಾದಲ್ಲಿ ಟಾರ್ಗೆಟ್ ಮಾಡುತ್ತಲೇ ಇರುತ್ತಾರೆ.

ಅವರು ಏನೇ ಮಾಡಿದರೂ ಟ್ರೋಲ್ ಆಗುತ್ತಲೇ ಇರುತ್ತದೆ. ಇತ್ತೀಚೆಗೆ ರಶ್ಮಿಕಾ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ನನ್ನ ಟೀಚರ್ ಬಲವಂತಕ್ಕೆ ಅಡಿಷನ್ ಗೆ ಹೋಗಲು ಒಪ್ಪಿಕೊಂಡೆ ಎಂಬ ಮಾತನ್ನೂ ಕೆಲವರು ಟ್ರೋಲ್ ಮಾಡಿದ್ದರು. ಇದರ ಬೆನ್ನಲ್ಲೇ ರಶ್ಮಿಕಾ ಟ್ರೋಲಿಗರಿಂದ ತಮಗಾಗುತ್ತಿರುವ ನೋವನ್ನು ಹಂಚಿಕೊಂಡಿದ್ದಾರೆ.

‘ಇತ್ತೀಚೆಗಿನ ವರ್ಷಗಳಲ್ಲಿ ಕೆಲವು ವಿಚಾರಗಳು ನನಗೆ ನೋವುಂಟು ಮಾಡುತ್ತಿದೆ. ಈ ಬಗ್ಗೆ ಮೊದಲೇ ನಾನು ಮಾತನಾಡಬೇಕಿತ್ತು. ಟ್ರೋಲ್ ಮತ್ತು ನೆಗೆಟಿವಿಟಿ ನಾನು ಇರುವ ಕ್ಷೇತ್ರದಲ್ಲಿ ಸಹಜ. ನನ್ನನ್ನು ನಿಮಗೆ ಇಷ್ಟವಿಲ್ಲ ಎಂದರೆ ನೆಗೆಟಿವಿಟಿ ಹಬ್ಬಿಸಬಹುದು ಎಂದಲ್ಲ. ನಿಮ್ಮನ್ನು ರಂಜಿಸಲು ಶ್ರಮಪಡುತ್ತೇನೆ. ನಾನು ಹೇಳಿಲ್ಲದೇ ಇರುವ ವಿಚಾರಕ್ಕೂ ನನ್ನ ಟ್ರೋಲ್ ಮಾಡುತ್ತಿರುವುದು ನೋವಿನ ವಿಚಾರ. ಸಂದರ್ಶನಗಳಲ್ಲಿ ನಾನು ಹೇಳುವುದನ್ನು ತಿರುಚಲಾಗುತ್ತದೆ. ನನಗೆ ಮತ್ತು ನನ್ನ ಸಂಬಂಧಗಳಿಗೆ ಹಾನಿ ಆಗುವ ವಿಚಾರಗಳನ್ನು ಹರಡಲಾಗುತ್ತದೆ. ಒಳ್ಳೆಯ ಟೀಕೆಗಳನ್ನು ಸ್ವೀಕರಿಸುತ್ತೇನೆ. ಆದರೆ ನೆಗೆಟಿವಿಟಿಯಿಂದ ಏನು ಸಾಧಿಸಲು ಸಾಧ್ಯ?’ ಎಂದು ರಶ್ಮಿಕಾ ನೋವು ತೋಡಿಕೊಂಡಿದ್ದಾರೆ. ಅವರ ಈ ಪೋಸ್ಟರ್ ಗೆ ಸಿನಿಮಾ ಸ್ನೇಹಿತರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments