ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ಸ್ಟಾರ್ ನಟ ಧನುಷ್ ಸಿನಿಮಾಗೆ ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿತ್ತು. ಅದೀಗ ನಿಜವಾಗಿದೆ.
ಧನುಷ್ ಅವರ ಡಿ51 ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ವಿಚಾರವನ್ನು ಸೋಷಿಯಲ್ ಮೀಡಿಯಾ ಮೂಲಕ ರಶ್ಮಿಕಾ ಹಂಚಿಕೊಂಡಿದ್ದಾರೆ.
ಶೇಖರ್ ಕಮ್ಮುಲ ನಿರ್ದೇಶಿಸಲಿರುವ ಆಕ್ಷನ್, ಲವ್ ಸ್ಟೋರಿ ಸಿನಿಮಾಗೆ ರಶ್ಮಿಕಾ ನಾಯಕಿಯಾಗಿದ್ದಾರೆ. ತಮಿಳು ಸ್ಟಾರ್ ನಟ ಧನುಷ್ ಇದೇ ಮೊದಲ ಬಾರಿಗೆ ತೆಲುಗು ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಇದೊಂದು ವಿಭಿನ್ನ ಕಥಾಹಂದರವಿರುವ ಸಿನಿಮಾವಾಗಿರಲಿದೆ.