ಬೆಂಗಳೂರು: ಬಹುಭಾಷಾ ನಟಿ, ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರು ವ್ಹೀಲ್ ಚೇರ್‌ನಲ್ಲಿ ಕುಳಿತಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಜಿಮ್‌ನಲ್ಲಿ ಕಾಲಿಗೆ ಪೆಟ್ಟಾದ ಹಿನ್ನೆಲೆ ನಡೆಯಲು ಕಷ್ಟಪಡುತ್ತಿರುವ ಸ್ಥಿತಿಯಲ್ಲಿ ಇಂದು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಕುಂಟುತ್ತಾ ಕಾರಿನಿಂದ ಇಳಿದು ವ್ಹೀಲ್ ಚೇರ್‌ನಲ್ಲಿ ಕೂರಲು ಹರಸಾಹಸ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.
ಕಾಲು ನೋವಿನ ನಡುವೆಯೂ ಒಪ್ಪಿಕೊಂಡಿರುವ ಸಿನಿಮಾ ಕೆಲಸ ಮಾಡಲು ಹೈದರಾಬಾದ್‌ನಿಂದ ಮುಂಬೈಗೆ ಅವರು ತೆರಳಿದ್ದಾರೆ. ಛಾವಾ ಸಿನಿಮಾಗೆ ಡಬ್ಬಿಂಗ್ ಮಾಡೋದ್ರಲ್ಲಿ ಅವರು ಬ್ಯುಸಿಯಾಗಿದ್ದಾರೆ.
ಇತ್ತೀಚೆಗೆ ಜಿಮ್‌ನಲ್ಲಿ ಕಾಲಿಗೆ ಪೆಟ್ಟಾಗಿರುವ ಬಗ್ಗೆ ನಟಿ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದರು. ಜಿಮ್‌ನಲ್ಲಿ ನಾನು ಗಾಯಗೊಂಡಿದ್ದೇನೆ. ಮುಂದಿನ ಕೆಲ ವಾರ ಅಥವಾ ತಿಂಗಳ ಕಾಲ ನಾನು ವಿಶ್ರಾಂತಿಯಲ್ಲಿರುತ್ತೇನೆ.
ನಾನು ಚೇತರಿಕೆಯಾಗಲು ಎಷ್ಟು ಸಮಯ ಬೇಕಾಗಬಹುದು ಎನ್ನುವುದು ದೇವರಿಗೆ ಮಾತ್ರ ತಿಳಿದಿದೆ. ನನ್ನ ಕಾಲಿನ ನೋವು ಗುಣವಾದ ಬಳಿಕ ನಾನು ಥಾಮ, ಸಿಕಂದರ್ ಮತ್ತು ಕುಬೇರ ಸೆಟ್‌ಗೆ ಮರಳುತ್ತೇನೆ. ಈ ವಿಳಂಬಕ್ಕೆ ಕ್ಷಮೆ ಕೋರುತ್ತೇನೆ ಎಂದು ನಟಿ ಹೇಳಿಕೊಂಡಿದ್ದರು.