Publish Date: Wed, 26 Jan 2022 (09:54 IST)
Updated Date: Wed, 26 Jan 2022 (09:56 IST)
ಮುಂಬೈ: ನಟಿ ರಶ್ಮಿಕಾ ಮಂದಣ್ಣ ಈಗ ಬಾಲಿವುಡ್ ನಲ್ಲೂ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಈಗ ಕಿರಿಕ್ ಬೆಡಗಿಯ ಬಗ್ಗೆ ಹೊಸ ಸುದ್ದಿಯೊಂದು ಹರಿದಾಡುತ್ತಿದೆ.
ರಶ್ಮಿಕಾ ಮಂದಣ್ಣ ಬಾಲಿವುಡ್ ನ ಖ್ಯಾತ ನಿರ್ಮಾಪಕ, ನಿರ್ದೇಶಕ ಕರಣ್ ಜೋಹರ್ ಕಚೇರಿಗೆ ಭೇಟಿ ನೀಡಿದ್ದಾರೆ. ಈಗಾಗಲೇ ಬಾಲಿವುಡ್ ನಲ್ಲಿ ಎರಡು ಚಿತ್ರ ಮಾಡಿರುವ ರಶ್ಮಿಕಾ ಈಗ ಮತ್ತೊಂದು ಬಿಗ್ ಸಿನಿಮಾದಲ್ಲಿ ಅಭಿನಯಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ದೊಡ್ಡ ಸಿನಿಮಾಗಳಲ್ಲಿ ಆಫರ್ ಪಡೆಯುತ್ತಿರುವ ರಶ್ಮಿಕಾ ಈಗ ಕರಣ್ ಜೋಹರ್ ಕಚೇರಿಯಲ್ಲಿ ಕಾಣಿಸಿಕೊಂಡಿರುವುದನ್ನು ನೋಡಿದರೆ ಸದ್ಯದಲ್ಲೇ ಮತ್ತೊಂದು ಸಿನಿಮಾ ಗ್ಯಾರಂಟಿ ಎನ್ನಲಾಗಿದೆ.