Select Your Language

Notifications

webdunia
webdunia
webdunia
webdunia

ರಶ್ಮಿಕಾ ಮಂದಣ್ಣಗೆ ಈ ಸೂಪರ್ ಸ್ಟಾರ್ ಗಳ ಜೊತೆ ನಟಿಸುವಾಸೆ

Rashmika Mandanna

Krishnaveni K

ಹೈದರಾಬಾದ್ , ಭಾನುವಾರ, 28 ಜನವರಿ 2024 (09:36 IST)
Photo Courtesy: Twitter
ಹೈದರಾಬಾದ್: ಟಾಲಿವುಡ್ ನಿಂದ ಬಾಲಿವುಡ್ ಗೆ ಹಾರಿ ಭಾರೀ ಬೇಡಿಕೆಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ತಮಗೆ ಮುಂಬರುವ ದಿನಗಳಲ್ಲಿ ಯಾವೆಲ್ಲಾ ಸೂಪರ್ ಸ್ಟಾರ್ ನಟರ ಜೊತೆ ನಟಿಸುವ ಆಸೆಯಿದೆ ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಇತ್ತೀಚೆಗಷ್ಟೇ ರಶ್ಮಿಕಾ ಅಭಿನಯಿಸಿದ್ದ ಅನಿಮಲ್ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಭಾರೀ ಯಶಸ್ಸು ಕಂಡಿತ್ತು. ಇದರೊಂದಿಗೆ ಬಾಲಿವುಡ್ ನಲ್ಲಿ ರಶ್ಮಿಕಾಗೆ ಮತ್ತಷ್ಟು ಬೇಡಿಕೆ ಬಂದಿದೆ.

ಈಗಾಗಲೇ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಜೊತೆಗೂ ನಟಿಸಿದ್ದಾರೆ. ತಮಿಳು, ತೆಲುಗಿನಲ್ಲೂ ಸ್ಟಾರ್ ನಟರಿಗೆ ನಾಯಕಿಯಾದ ಹೆಗ್ಗಳಿಕೆ ಅವರದ್ದು. ಇದರ ನಡುವೆ ಸಂದರ್ಶನವೊಂದರಲ್ಲಿ ತಮ್ಮ ವೃತ್ತಿ ಜೀವನದಲ್ಲಿ ತಾವು ಯಾವೆಲ್ಲಾ ಸೂಪರ್ ಸ್ಟಾರ್ ನಟರ ಜೊತೆ ನಟಿಸುವ ಆಸೆಯಿದೆ ಎಂದಿದ್ದಾರೆ.

ಮುಂದಿನ ದಿನಗಳಲ್ಲಿ ಶಾರುಖ್ ಖಾನ್, ಸಲ್ಮಾನ್ ಖಾನ್, ಹೃತಿಕ್ ರೋಷನ್, ಜ್ಯೂ.ಎನ್ ಟಿಆರ್ ಮತ್ತು ರಾಮ್ ಚರಣ್ ಜೊತೆ ನಟಿಸುವ ಆಸೆಯಿದೆ ಎಂದು ಹೇಳಿದ್ದಾರೆ. ಆದರೆ ಈ ಪಟ್ಟಿಯಲ್ಲಿ ಒಬ್ಬರೇ ಒಬ್ಬ ಕನ್ನಡ ನಟರ ಹೆಸರಿಲ್ಲ. ಸದ್ಯಕ್ಕೆ ರಶ್ಮಿಕಾ ಪುಷ್ಪ 2 ಸಿನಿಮಾದಲ್ಲಿ ನಟಿಸಿದ್ದು, ಆ ಸಿನಿಮಾ ಇದೇ ವರ್ಷ ತೆರೆ ಕಾಣುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಂದೆ ರಜನೀಕಾಂತ್ ಪರವಾಗಿ ಪುತ್ರಿ ಐಶ್ವರ್ಯಾ ಬ್ಯಾಟಿಂಗ್