Select Your Language

Notifications

webdunia
webdunia
webdunia
webdunia

ಕೊನೆಗೂ ಕನ್ನಡ ಸಿನಿಮಾ ಬಗ್ಗೆ ಮಾತನಾಡಿದರು ರಶ್ಮಿಕಾ ಮಂದಣ್ಣ

ಕೊನೆಗೂ ಕನ್ನಡ ಸಿನಿಮಾ ಬಗ್ಗೆ ಮಾತನಾಡಿದರು ರಶ್ಮಿಕಾ ಮಂದಣ್ಣ
ಬೆಂಗಳೂರು , ಸೋಮವಾರ, 21 ಅಕ್ಟೋಬರ್ 2019 (09:02 IST)
ಬೆಂಗಳೂರು: ಅಪ್ಪಟ ಕನ್ನಡತಿಯಾದರೂ ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಪರಭಾಷೆಗಳಲ್ಲೇ ಬ್ಯುಸಿಯಾಗಿದ್ದಾರೆ. ಅದರಲ್ಲೂ ಕನ್ನಡದ ಬಗ್ಗೆ ಅವರು ಇತ್ತೀಚೆಗೆ ನೀಡಿದ ಹೇಳಿಕೆಗಳು ಅವರ ಮೇಲೆ ಮತ್ತಷ್ಟು ಆಕ್ರೋಶ ಮೂಡಲು ಕಾರಣವಾಗಿತ್ತು.


ರಶ್ಮಿಕಾ ಕನ್ನಡಕ್ಕಿಂತ ಬೇರೆ ಭಾಷೆಯ ಸಿನಿಮಾಗಳಲ್ಲೇ ಹೆಚ್ಚು ಬ್ಯುಸಿಯಾಗಿದ್ದಾರೆ ಎಂಬ ಆರೋಪಗಳ ಬೆನ್ನಲ್ಲೇ ಈಗ ಅವರ ಕನ್ನಡ ಸಿನಿಮಾವೊಂದು ಬಿಡುಗಡೆಗೆ ಸಿದ್ಧವಾಗಿ ನಿಂತಿದೆ.

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಜತೆಗೆ ರಶ್ಮಿಕಾ ಮಂದಣ್ಣ ಅಭಿನಯಿಸಿರುವ ‘ಪೊಗರು’ ಸಿನಿಮಾದ ಡೈಲಾಗ್ ಟ್ರೈಲರ್ ಅಕ್ಟೋಬರ್ 24 ರಂದು ಬಿಡುಗಡೆಯಾಗಲಿದೆ. ಈ ಸಿನಿಮಾ ಬಗ್ಗೆ ರಶ್ಮಿಕಾ ತಮ್ಮ ಇನ್ ಸ್ಟಾಗ್ರಾಂ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ. ಅಂತೂ ಬಹಳ ದಿನಗಳ ನಂತರ ರಶ್ಮಿಕಾ ಸಿನಿಮಾವೊಂದು ಕನ್ನಡದಲ್ಲಿ ಬಿಡುಗಡೆಯಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹರಿಪ್ರಿಯಾ ಕನ್ನಡ್ ಗೊತ್ತಿಲ್ಲ ಸಿನಿಮಾ ಕತೆ ಏನಾಯ್ತು?