Webdunia - Bharat's app for daily news and videos

Install App

ರೇವ್ ಪಾರ್ಟಿ ಪ್ರಕರಣ: ಕೊನೆಗೂ ಜೈಲಿನಿಂದ ಬಿಡುಗಡೆಯಾದ ನಟಿ ಹೇಮಾ

Sampriya
ಶುಕ್ರವಾರ, 14 ಜೂನ್ 2024 (14:03 IST)
ಬೆಂಗಳೂರು: ರೇವ್ ಪಾರ್ಟಿಯಲ್ಲಿ ಭಾಗಿಯಾಗಿ ಜೈಲು ಪಾಲಾಗಿದ್ದ ಟಾಲಿವುಡ್‌ ನಟಿ ಹೇಮಾ ಅವರಿಗೆ ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್ ವಿಶೇಷ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಎನ್‌ಡಿಪಿಎಸ್ ವಿಶೇಷ ಕೋರ್ಟ್ ಜೂನ್ 12ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ, ಜಾಮೀನು ಪ್ರಕ್ರಿಯೆ ವಿಳಂಬ ಆದ ಹಿನ್ನೆಲೆ ಇಂದು ಹೇಮಾರನ್ನು ಬಿಡುಗಡೆ ಮಾಡಲಾಯಿತು. ಈ ವೇಳೆ, ಹೇಮಾರನ್ನು ಕರೆದೊಯ್ಯಲು ಅವರ ಸಹೋದರ ಬಂದಿದ್ದರು.

ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ನಟಿ ಭಾಗಿಯಾಗಿದ್ದರು. ನಾನು ಬೆಂಗಳೂರಿನಲ್ಲಿ ಇಲ್ಲ, ಹೈದರಾಬಾದ್‌ನಲ್ಲಿರೋದಾಗಿ ವಿಡಿಯೋ ಮಾಡಿ ಹೇಮಾ ದಿಕ್ಕು ತಪ್ಪಿಸಿದ್ದರು. ಬಳಿಕ ಡ್ರಗ್ಸ್ ಪಡೆದಿರುವ ಬಗ್ಗೆ ಪಾಸಿಟಿವ್ ರಿಪೋರ್ಟ್ ಬಂದ ಬೆನ್ನಲ್ಲೇ ನಟಿಗೆ 2 ಬಾರಿ ಪೊಲೀಸರು ನೋಟಿಸ್ ನೀಡಿದ್ದರು.

ಬಳಿಕ ವಿಚಾರಣೆಗೆ ಬಂದ ಹೇಮಾರನ್ನು ಪೊಲೀಸರು ಬಂಧಿಸಿದ್ದರು. ಜೂನ್ 14ರವರೆಗೆ ನಾಲ್ಕನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಧೀಶರಾದ ಸಲ್ಮಾ ಎ.ಎಸ್ ಅವರಿದ್ದ ಪೀಠ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿತ್ತು.

ಹೇಮಾ ಸುಮಾರು 250 ಚಿತ್ರಗಳಲ್ಲಿ ನಟಿಸಿದ್ದಾರೆ. ಸ್ಟಾರ್ ನಟರ ಚಿತ್ರಗಳಲ್ಲಿ ಖಾಯಂ ಪೋಷಕ ನಟಿಯಾಗಿ ಹೇಮಾ ಕೆಲಸ ಮಾಡಿದ್ದಾರೆ. ಕನ್ನಡದಲ್ಲೂ ನಟಿಸಿದ್ದ ಹೇಮಾ 2014ರಲ್ಲಿ ಪುನೀತ್ ರಾಜ್‌ಕುಮಾರ್ ನಟನೆಯ ಪವರ್ ಚಿತ್ರದಲ್ಲೂ ಕಾಣಿಸಿಕೊಂಡಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೆ ಹೋಗಲಿರುವ ಸ್ಪರ್ಧಿಗಳು ಯಾರೆಲ್ಲಾ

ಪೋರ್ನ್‌ ಇಂಡಸ್ಟ್ರಿಗೆ ಎಂಟ್ರಿ ಕೊಟ್ರಾ ಅಸ್ಸಾಂ ಮೂಲದ ಬೆಡಗಿ, ವದಂತಿಗೆ ಈ ಫೋಸ್ಟ್‌ ಕಾರಣ

ಮತ್ತೇ ಬಣ್ಣದ ಲೋಕಕ್ಕೆ ವಾಪಸ್ಸಾದ ಮಾಜಿ ಸಚಿವೆ ಸ್ಮೃತಿ ಇರಾನಿ, ಫಸ್ಟ್‌ ಲುಕ್‌ ಫ್ಯಾನ್ಸ್ ಫಿದಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಮುಂದಿನ ಸುದ್ದಿ
Show comments