Publish Date: Sun, 15 May 2022 (09:30 IST)
Updated Date: Sun, 15 May 2022 (09:31 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಕ್ರಾಂತಿ ಶೂಟಿಂಗ್ ಕೊನೆಯ ಹಂತಕ್ಕೆ ಬಂದು ತಲುಪಿದೆ.
ಇದೀಗ ಕ್ರಾಂತಿ ಸೆಟ್ ನಲ್ಲಿ ದರ್ಶನ್ ಜೊತೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಇರುವ ಫೋಟೋ ಒಂದು ಸಾಮಾಜಿಕ ಜಾಲತಾನದಲ್ಲಿ ವೈರಲ್ ಆಗಿದೆ.
ಬೆಂಗಳೂರಿನ ಹೊರಾವರಣದಲ್ಲಿ ವಿಶೇಷ ಸೆಟ್ ನಲ್ಲಿ ಕ್ರಾಂತಿ ಶೂಟಿಂಗ್ ಭರದಿಂದ ಸಾಗುತ್ತಿದೆ. ಶೂಟಿಂಗ್ ನಲ್ಲಿ ರವಿಚಂದ್ರನ್ ಕೂಡಾ ಕೂಡಿಕೊಂಡಿದ್ದಾರೆ. ಈ ಸಿನಿಮಾವನ್ನು ವಿ. ಹರಿಕೃಷ್ಣ ನಿರ್ದೇಶಿಸುತ್ತಿದ್ದು, ರಚಿತಾ ರಾಂ ದರ್ಶನ್ ಗೆ ನಾಯಕಿಯಾಗಿದ್ದಾರೆ.