Publish Date: Mon, 28 Feb 2022 (09:50 IST)
Updated Date: Mon, 28 Feb 2022 (10:01 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ಇಂದು ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
ಕೆಲವು ಸಮಯದಿಂದ ಪಟ್ಟಮ್ಮಾಳ್ ಅನಾರೋಗ್ಯ ಪೀಡಿತರಾಗಿದ್ದಾರೆ. ತೀವ್ರ ಅನಾರೋಗ್ಯದಿಂದಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕೆಲ ಹೊತ್ತು ರವಿಚಂದ್ರನ್ ಅವರ ರಾಜಾಜಿನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಅದಾದ ಬಳಿಕ ಇಂದು ಸಂಜೆಯೇ ಅಂತ್ಯ ಸಂಸ್ಕಾರ ನೆರವೇರಲಿದೆ.