Publish Date: Fri, 28 Feb 2020 (09:11 IST)
Updated Date: Fri, 28 Feb 2020 (09:13 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಸಿನಿಮಾದಲ್ಲಿ ಬಾಲಿವುಡ್ ನಟಿ ರವೀನಾ ಟಂಡನ್ ರಮೀಕಾ ಸೇನ್ ಎಂಬ ಮಹತ್ವದ ಪಾತ್ರ ನಿಭಾಯಿಸುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಇದೀಗ ರವೀನಾ ಸೆಟ್ ನಿಂದ ಪ್ಯಾಕಪ್ ಮಾಡಿಕೊಂಡಿದ್ದಾರೆ.
ಅಂದರೆ ರವೀನಾ ತಮ್ಮ ಪಾಲಿನ ಶೂಟಿಂಗ್ ಮುಗಿಸಿಕೊಟ್ಟಿದ್ದು ಕೆಜಿಎಫ್ ತಂಡಕ್ಕೆ ಗುಡ್ ಬೈ ಹೇಳಿದ್ದಾರೆ. ಎರಡು ಹಂತದಲ್ಲಿ ಚಿತ್ರೀಕರಣದಲ್ಲಿ ಪಾಲ್ಗೊಂಡ ರವೀನಾ ಈ ವಿಚಾರವನ್ನು ಖುಷಿಯಿಂದಲೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಕೆಜಿಎಫ್ 2 ಸಿನಿಮಾ ಕೂಡಾ ಕೊನೆಯ ಹಂತದ ಚಿತ್ರೀಕರಣ ನಡೆಸುತ್ತಿದ್ದು, ಸದ್ಯದಲ್ಲೇ ಟೀಸರ್ ಬಿಡುಗಡೆಯಾಗುವ ನಿರೀಕ್ಷೆಯಿದೆ.
Krishnaveni K
Publish Date: Fri, 28 Feb 2020 (09:11 IST)
Updated Date: Fri, 28 Feb 2020 (09:13 IST)