ಪುಷ್ಪ ಡೈರೆಕ್ಟರ್ ಸುಕುಮಾರ್ ಜೊತೆ ರಾಮ್ ಚರಣ್ ಮುಂದಿನ ಸಿನಿಮಾ

Krishnaveni K
ಸೋಮವಾರ, 25 ಮಾರ್ಚ್ 2024 (15:21 IST)
Photo Courtesy: Twitter
ಹೈದರಾಬಾದ್: ಪುಷ್ಪ ಖ್ಯಾತಿಯ ನಿರ್ದೇಶಕ ಸುಕುಮಾರ್ ಜೊತೆ ರಾಮ್ ಚರಣ್ ಮುಂದಿನ ಸಿನಿಮಾ ಆರ್ ಸಿ17 ಘೋಷಣೆಯಾಗಿದೆ. ಹೋಳಿ ಹಬ್ಬದ ದಿನವೇ ಈ ಸಿಹಿ ಸುದ್ದಿ ಫ್ಯಾನ್ಸ್ ಗೆ ಸಿಕ್ಕಿದೆ.

ಸುಕುಮಾರ್ ನಿರ್ದೇಶನದಲ್ಲಿ ರಾಮ್ ಚರಣ್ ಈ ಮೊದಲು ರಂಗಸ್ಥಳಂ ಸಿನಿಮಾ ಮಾಡಿದ್ದರು. ಅದು ಭಾರೀ ಹಿಟ್ ಆಗಿತ್ತು. ಇದಾದ ಬಳಿಕ ರಾಮ್ ಚರಣ್ ಮತ್ತು ಸುಕುಮಾರ್ ತಮ್ಮದೇ ಸಿನಿಮಾಗಳಲ್ಲಿ ಬ್ಯುಸಿಯಾದರು. ಇದೀಗ ಈ ಹಿಟ್ ಜೋಡಿ ಮತ್ತೆ ಒಂದಾಗುತ್ತಿದೆ.

ಎರಡು ಕುದುರೆಗಳು ಓಡಲು ತಯಾರಾಗಿರುವ ಫೋಟೋ ಇರುವ ಪೋಸ್ಟರ್ ಒಂದನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಆರ್ ಸಿ16 ಸಿನಿಮಾ ಬಳಿಕ ರಾಮ್ ಚರಣ್ ಕೈಗೆತ್ತಿಕೊಳ್ಳಲಿರುವ ಪ್ರಾಜೆಕ್ಟ್ ಇದಾಗಲಿದೆ. ಈ ಹಿಟ್ ಜೋಡಿ ಮತ್ತೆ ಒಂದಾಗಿ ಸಿನಿಮಾ ಮಾಡುತ್ತಿರುವುದರಿಂದ ಅಭಿಮಾನಿಗಳಲ್ಲೂ ಕುತೂಹಲ ಹೆಚ್ಚಾಗಿದೆ.

ಸುಕುಮಾರನ್ ಫೇವರಿಟ್ ಸಂಗೀತ ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ ಅಲಿಯಾಸ್ ಡಿಎಸ್ ಪಿ ಈ ಸಿನಿಮಾಗೆ ಸಂಗೀತ ಸಂಯೋಜಿಸಲಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹಾಕುತ್ತಿದೆ. ಸಿನಿಮಾದ ಬಗ್ಗೆ ಉಳಿದ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments