Webdunia - Bharat's app for daily news and videos

Install App

ದರ್ಶನ್ ಕೇಸ್ ನ್ನು ಎಲ್ಲಾ ಓಪನ್ ಆಗಿ ಮಾಡ್ಲಿ: ರಿಯಲ್ ಸ್ಟಾರ್ ಉಪೇಂದ್ರ

Krishnaveni K
ಸೋಮವಾರ, 17 ಜೂನ್ 2024 (11:33 IST)
ಬೆಂಗಳೂರು: ನಟ ದರ್ಶನ್ ತೂಗುದೀಪ ಪ್ರಕರಣದ ಬಗ್ಗೆ ಕಿಚ್ಚ ಸುದೀಪ್ ಹೇಳಿಕೆಯ ನಂತರ ಇದೀಗ ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ಉಪೇಂದ್ರ ಮುಕ್ತವಾಗಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ದರ್ಶನ್ ಪ್ರಕರಣದ ಬಗ್ಗೆ ಉಪೇಂದ್ರ ಸುದೀರ್ಘ ಪೋಸ್ಟ್ ಮಾಡಿದ್ದಾರೆ. ಪ್ರಕರಣದ ಬಗ್ಗೆ ಪಾರ್ದರ್ಶಕವಾಗಿ ತನಿಖೆಯಾಗಲಿ, ಸ್ಟೇಷನ್ ನಲ್ಲಿ ನಡೆಯುವ ವಿಚಾರಣೆಗಳೆಲ್ಲಾ ಮುಚ್ಚುಮರೆಯಿಲ್ಲದೇ ನಡೆಯಲಿ ಎಂದು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಹಾಕಿರುವ ಶಾಮಿಯಾನಕ್ಕೂ ಟಾಂಗ್ ಕೊಟ್ಟಿದ್ದಾರೆ.

‘ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ, ರೇಣುಕಾಸ್ವಾಮಿ ಕೊಲೆ ಪ್ರಕರಣ ಮತ್ತುಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ, ಇಡೀ ಭಾರತವೇ ನಿಬ್ಬೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ ನ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟಿವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ, ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ ಯಾವುದೇ ಕೇಸ್ ಆದರೂ ಆ ಕೇಸ್ ನ ವಿಚಾರಣೆಯ ವಿಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೊಲೀಸರು ಸಂಬಂಧಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. (ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸಿಕೊಳ್ಳುತ್ತಿದ್ದರು. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರಿದಿದ್ದು ಎಲ್ಲವನ್ನೂ ವಿಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ನೋಡಬಹುದು). ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಕೇಸ್ ಆಗಿದ್ದರೆ ಆ ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೊಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು. ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವೆಲ್ಲದಕ್ಕೂ ತೆರೆ ಎಳೆದಂತಾಗುತ್ತದೆ’ ಉಪೇಂದ್ರ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments