Publish Date: Wed, 02 Jun 2021 (09:16 IST)
Updated Date: Wed, 02 Jun 2021 (09:17 IST)
ಬೆಂಗಳೂರು: ಕೊರೋನಾದಿಂದಾಗಿ ಸಂಕಷ್ಟದಲ್ಲಿರುವ ಸಿನಿಮಂದಿಗೆ ಆರ್ಥಿಕ ನೆರವು ನೀಡಲು ಮುಂದಾದ ರಾಕಿಂಗ್ ಸ್ಟಾರ್ ಯಶ್ ಗೆ ರಿಯಲ್ ಸ್ಟಾರ್ ಉಪೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಂಕಷ್ಟದಲ್ಲಿರುವ ಕಲಾವಿದರು, ತಂತ್ರಜ್ಞರಿಗೆ ವೈಯಕ್ತಿಕವಾಗಿ ಯಶ್ ತಲಾ 5000 ರೂ.ಗಳನ್ನು ನೀಡಲು ನಿರ್ಧರಿಸಿದ್ದಾರೆ. ಇದಕ್ಕೆ ಉಪೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಸಂಕಷ್ಟದಲ್ಲಿರುವವರಿಗೆ ಆಹಾರ ಕಿಟ್ ವಿತರಿಸುವ ಮೂಲಕ ಸುದ್ದಿಯಲ್ಲಿರುವ ಉಪೇಂದ್ರ, ಯಶ್ ಕೆಲಸವನ್ನು ಮೆಚ್ಚಿದ್ದು, ಇದು ಉತ್ತಮ ನಿರ್ಧಾರ, ಧನ್ಯವಾದಗಳು ಯಶ್. ಇಂತಹ ಮತ್ತಷ್ಟು ಮಹತ್ಕಾರ್ಯ ತಮ್ಮಿಂದ ನಡೆಸಲು ಆ ಭಗವಂತ ತಮಗೆ ಶಕ್ತಿ ನೀಡಲಿ ಎಂದು ಹಾರೈಸಿದ್ದಾರೆ.