Webdunia - Bharat's app for daily news and videos

Install App

ರೆಬಲ್ ಸ್ಟಾರ್ ಅಂಬರೀಶ್ ಮತ್ತೆ ಹುಟ್ಟಿ ಬರ್ತಿದ್ದಾರೆ: ಗುಡ್ ನ್ಯೂಸ್ ಕೊಡ್ತಿದ್ದಾರಾ ಅಭಿಷೇಕ್-ಅವಿವಾ

Krishnaveni K
ಗುರುವಾರ, 8 ಆಗಸ್ಟ್ 2024 (12:27 IST)
Photo Credit: Instagram
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಮನೆಯಲ್ಲಿ ಈಗ ಸಂಭ್ರಮದ ವಾತಾವರಣವಿದೆ. ಅಂಬಿ ಪುತ್ರ ಅಭಿಷೇಕ್ ಅಂಬರೀಶ್-ಅವಿವಾ ದಂಪತಿ ಈಗ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸುದ್ದಿ ಹರಿದಾಡಿದೆ.

ಅವಿವಾ ಬಿಡಪಾ ಮತ್ತು ಅಭಿಷೇಕ್ ಕಳೆದ ವರ್ಷ ಜೂನ್ ನಲ್ಲಿ ಮದುವೆಯಾಗಿದ್ದರು. ಇದೀಗ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸುದ್ದಿ ಹರಿದಾಡಿದೆ. ಆದರೆ ಈ ಬಗ್ಗೆ ಇನ್ನೂ ಸುಮಲತಾ ಆಗಲೀ, ಅಭಿಷೇಕ್-ಅವಿವಾ ಆಗಲೀ ಅಧಿಕೃತವಾಗಿ ಸುದ್ದಿ ಪ್ರಕಟಿಸಲ್ಲ.

ಆದರೆ ಈ ವಾರಂತ್ಯವೇ ಅಂಬಿ ಮನೆಯಲ್ಲಿ ಸೀಮಂತ ಶಾಸ್ತ್ರ ನೆರವೇರಿಸಲು ತಯಾರಿ ನಡೆದಿದೆ ಎನ್ನಲಾಗಿದೆ. ಇತ್ತೀಚೆಗೆ ಅಂಬರೀಶ್ ಪುಣ್ಯಸ್ಮರಣೆ ಕಾರ್ಯಕ್ರಮದಂದು ಸುಮಲತಾಗೆ ಮಗ-ಸೊಸೆ ಕಡೆಯಿಂದ ಗುಡ್ ನ್ಯೂಸ್ ಯಾವಾಗ ಎಂಬ ಪ್ರಶ್ನೆ ಕೇಳಲಾಗಿತ್ತು. ಅದಕ್ಕೆ ಸುಮಲತಾ ಸದ್ಯಕ್ಕೆ ಅಂತಹದ್ದೇನೂ ಸುದ್ದಿ ಇಲ್ಲ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದರು.

ಇದೀಗ ಅಂಬಿ ಮನೆಯಲ್ಲಿ ಮೊದಲ ಮಗುವನ್ನು ಬರಮಾಡಿಕೊಳ್ಳಲು ಸಿದ್ಧತೆ ನಡೆದಿದೆ ಎಂಬ ಸುದ್ದಿ ಕೇಳಿಬರುತ್ತಿದೆ. ನಟ ದರ್ಶನ್ ಬಂಧನದ ಬಳಿಕ ಸುಮಲತಾ, ಅಭಿಷೇಕ್ ಬಹಿರಂಗವಾಗಿ ಕಾಣಿಸಿಕೊಂಡಿದ್ದೇ ಅಪರೂಪ. ಇದರ ನಡುವೆ ಈಗ ಇಂತಹದ್ದೊಂದು ಸುದ್ದಿ ಕೇಳಿಬರುತ್ತಿದೆ. ಇದನ್ನು ಅವರೇ ಖಚಿತಪಡಿಸಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ದರ್ಶನ್ ಮಾತಾಡೋವರೆಗೂ ಇದೊಂದು ಕೆಲಸ ಮಾಡಲ್ವಂತೆ ಪ್ರಥಮ್

ರಮ್ಯಾ ಆಮೇಲೆ, ಮೊದಲು ಯುವ ಪತ್ನಿಗೆ ನ್ಯಾಯ ಕೊಡಿಸಿ: ಶಿವಣ್ಣಗೆ ಡಿಬಾಸ್ ಫ್ಯಾನ್ಸ್ ಎಚ್ಚರಿಕೆ

ಡಿಬಾಸ್ ಫ್ಯಾನ್ಸ್ ರಮ್ಯಾ ಕದನಕ್ಕೆ ಶಿವಣ್ಣನ ಎಂಟ್ರಿ, ಹೇಳಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments