ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಸ್ಮಾರಕ ನಿರ್ಮಾಣ ಪೂರ್ಣಗೊಂಡಿದ್ದು, ಉದ್ಘಾಟನೆ ದಿನಾಂಕವೂ ಗೊತ್ತಾಗಿದೆ.
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಮಾರ್ಚ್ 27 ಕ್ಕೆ ಸ್ಮಾರಕ ಉದ್ಘಾಟನೆಯಾಗಲಿದೆ ಎಂದಿದ್ದಾರೆ.
ಮುಂದೆ ಡಾ. ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಸ್ಮಾರಕವನ್ನೂ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.