Webdunia - Bharat's app for daily news and videos

Install App

ಇಂದು ರೆಬೆಲ್‌ ಸ್ಟಾರ್‌ ಅಂಬಿ ಜನ್ಮದಿನ: ಭಾವುಕವಾಗಿ ಬರೆದುಕೊಂಡ ಸುಮಲತಾ

sampriya
ಬುಧವಾರ, 29 ಮೇ 2024 (15:16 IST)
Photo By X
ಬೆಂಗಳೂರು: ರೆಬೆಲ್‌ ಸ್ಟಾರ್‌, ಮಂಡ್ಯದ ಗಂಡು ಅಂಬರೀಷ್‌ ಅವರ ಜನ್ಮದಿನ ಇಂದು. ಸಿನಿಮಾ ಮಾತ್ರವಲ್ಲದೆ ರಾಜಕೀಯ ಕ್ಷೇತ್ರದಲ್ಲೂ ಕಾಣಿಸಿಕೊಂಡಿದ್ದ ಅವರು ಇಹಲೋಹ ತ್ಯಜಿಸಿದರೂ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅಂಬಿ ಜನ್ಮದಿನದ ಅಂಗವಾಗಿ ಸುಮಲತಾ ಅಂಬರೀಶ್‌ ಅವರು ಸಾಮಾಜಿಕ ಜಾಲತಣದಲ್ಲಿ ಭಾವುಕವಾಗಿ ಬರೆದುಕೊಂಡಿದ್ದಾರೆ.

ನೀವು ಸದಾ ನೆನಪಾಗುತ್ತೀರಿ. ನಿಮ್ಮನ್ನು ನೆನಸಿಕೊಂಡಾಗಲೆಲ್ಲ ಮುಖದಲ್ಲಿ ನಗು ಮೂಡುತ್ತದೆ. ನಿಮ್ಮನ್ನು ಬಹಳ ಮಿಸ್ ಮಾಡಿಕೊಳ್ಳುತ್ತೇನೆ. ನೀವು ಎಲ್ಲಿ ವಿಶ್ರಾಂತಿ ಪಡೆಯುತ್ತೀರೋ ಅಲ್ಲಿ ನಿಮ್ಮ ಸ್ಮರಣೆಯು ನನಗೆ ಅಮೂಲ್ಯ ಮತ್ತು ಉತ್ತಮ ಎಂದು ನಾನು ಭಾವಿಸುತ್ತೇನೆ. ನೀವು ನಮ್ಮ ಜೀವನದ ಒಂದು ಭಾಗ. ಪ್ರತಿಕ್ಷಣ ಮತ್ತು ಎಂದೆಂದಿಗೂ. ನೀವು ಬದುಕನ್ನು ಮೀರಿದವರು.. ನೀವೇ ಜೀವನ. ಸ್ವರ್ಗದಲ್ಲಿ ಜನ್ಮದಿನದ ಶುಭಾಶಯಗಳು ಎಂದು ಸುಮಲತಾ ಅವರು ಪತಿಯನ್ನು ನೆನೆದುಕೊಂಡು ಬರೆದುಕೊಂಡಿದ್ದಾರೆ.

ಅಜಾತಶತ್ರುವಾಗಿದ್ದ ಅಂಬಿ ನವೆಂಬರ್ 24, 2018ರಂದು ಹೃದಯಾಘಾತದಿಂದ ನಿಧನರಾದರು. ಅಂಬರೀಶ್‌ ಅವರು ಸ್ಯಾಂಡಲ್‌ವುಡ್‌ನಲ್ಲಿ ಮಾತ್ರವಲ್ಲದೆ ಬಾಲಿವುಡ್‌, ಟಾಲಿವುಡ್‌, ಕಾಲಿವುಡ್‌ನಲ್ಲಿಯೂ ಅಪಾರ ಸ್ನೇಹ ಬಳಗ ಹೊಂದಿದ್ದರು. ಕೇಂದ್ರ ಹಾಗೂ ರಾಜ್ಯದ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಕನ್ನಡ ಚಿತ್ರರಂಗಕ್ಕೆ ದೊಡ್ಡಣ್ಣನಂತೆ ಇದ್ದರು.  ಅಂಬಿ ಹುಟ್ಟುಹಬ್ಬದ ಪ್ರಯುಕ್ತ ಅಲ್ಲಲ್ಲಿ ಅನೇಕ ಸಾಮಾಜಿಕ ಕೆಲಸಗಳನ್ನು ಮಾಡಲಾಗುತ್ತಿದೆ.

ಅಂಬಿ ಸಮಾಧಿಯ ಬಳಿ ಕುಟುಂಬದ ಸದಸ್ಯರಿಂದ ಮತ್ತು ಅಭಿಮಾನಿಗಳಿಂದ ಪೂಜೆ ನಡೆಯಿತು. ಪೂಜೆಯ ಬಳಿಕ ಮಂಡ್ಯದತ್ತ ಸುಮಲತಾ ತೆರಳಲಿದ್ದಾರೆ. ಮಂಡ್ಯದೆಲ್ಲೆಡೆ ಅಂಬರೀಶ್ ಹುಟ್ಟುಹಬ್ಬದ ಆಚರಣೆ ಸಂಭ್ರಮರಿಂದ ನಡೆಯುತ್ತಿದೆ. ಮಧ್ಯಾಹ್ನ 3 ಗಂಟೆಗೆ ಮಂಡ್ಯದಲ್ಲಿ ಅಂಬಿ ಜನ್ಮ ಜಯಂತಿ ಆಚರಣೆ ಆಗುತ್ತಿದೆ. ಹಲವು ಸಾಮಾಜಿಕ ಕೆಲಸ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments