Webdunia - Bharat's app for daily news and videos

Install App

ದರ್ಶನ್- ಪವಿತ್ರಾ ಗೌಡ ನಡುವಿನ ಸಂಬಂಧ ಚಾರ್ಜ್‌ಶೀಟ್‌ನಲ್ಲಿ ಬಟಾಬಯಲು

Sampriya
ಗುರುವಾರ, 5 ಸೆಪ್ಟಂಬರ್ 2024 (20:07 IST)
Photo Courtesy X
ಬೆಂಗಳೂರು: ಆಪ್ತೆ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಆಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ನಟ ದರ್ಶನ್ ಕೊಲೆ ಮಾಡಿದೆ ಎಂಬುದು ತನಿಖೆಯಲ್ಲಿ ಬಯಲಾಗಿದೆ. ಇದೀಗ ತನಿಖೆ ಫೈನಲ್ ಹಂತಕ್ಕೆ ತಲುಪಿ ಆರೋಪಿಗಳ ವಿರುದ್ಧದ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ.

ಇದೀಗ ಪ್ರಕರಣ ಸಂಬಂಧ ಡಿಗ್ಯಾಂಗ್ ನಡೆಸಿದ ಭೀಕರ ಕೃತ್ಯ ಜತೆಗೆ ಇತರ ಅನೇಕ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ. ಜಾರ್ಜ್‌ಶೀಟ್‌ನಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಜತೆಗಿರುವ ಸಂಬಂಧ ಬಗ್ಗೆ ಉಲ್ಲೇಖವಾಗಿದೆ. ಈ ಪ್ರಕರಣ ಬಯಲಿಗೆ ಬರುತ್ತಿದ್ದ ಹಾಗೇ ದರ್ಶನ್‌ಗೆ ಪವಿತ್ರಾ ಗೌಡ ಜತೆ ಮದುವೆಯಾಗಿತ್ತು ಎಂಬ ವಿಚಾರವು ಮುನ್ನೆಲೆಗೆ ಬಂದಿತ್ತು. ಆದರೆ ಇದೀಗ ಇದಕ್ಕೆಲ್ಲ ಉತ್ತರ ಸಿಕ್ಕಿದೆ.

ಈ ಹಿಂದೆ ದರ್ಶನ್ ಜತೆಗಿರುವ ಫೋಟೋವನ್ನು ಪವಿತ್ರಾ ಗೌಡ ಹಂಚಿಕೊಂಡು ನಮ್ಮಿಬ್ಬರ ಸಂಬಂಧಕ್ಕೆ 10 ವರ್ಷ ಎಂದಿದ್ದರು. ಇದೇ ವಿಚಾರಕ್ಕೆ ದರ್ಶನ್​ ಪತ್ನಿ ವಿಜಯಲಕ್ಷ್ಮಿ ಕೂಡ ಪವಿತ್ರಾ ಮೇಲೆ ಸಿಟ್ಟಾಗಿದ್ರು. ಇಬ್ಬರ ನಡುವೆ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್ ವಾರ್ ಕೂಡ ನಡೆದಿತ್ತು. ಇದನ್ನು ನೋಡಿದವರು ಇವರು ಗುಟ್ಟಾಗಿ ಮದುವೆಯಾಗಿದ್ದಾರೆ ಎಂದು ಹೇಳಲಾಗಿತ್ತು.  

ಚಾರ್ಜ್‌ಶೀಟ್‌ನಲ್ಲಿ ದರ್ಶನ್ ಹಾಗೂ ಪವಿತ್ರಾ ಸುಮಾರು ವರ್ಷಗಳಿಂದ ಒಡನಾಟ ಹೊಂದಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಕೆಲ ವರ್ಷಗಳಿಂದ ಇಬ್ಬರು ಲಿವಿಂಗ್ ಇನ್ ರಿಲೇಷನ್ ಶಿಪ್ ನಲ್ಲಿದ್ದರು ಎಂಬ ವಿಚಾರ ಇದೀಗ ಬಯಲಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಹಾಗೂ ಪವಿತ್ರಾ ಗೌಡ ಇಬ್ಬರನ್ನು ಬಂಧಿಸಿದ ವೇಳೆ ಸುದ್ದಿಗೋಷ್ಠಿ ನಡೆಸಿದ್ದ ಪೊಲೀಸರು ಪವಿತ್ರಾ ಗೌಡ ಅವರನ್ನು ದರ್ಶನ್ ಪತ್ನಿ ಎಂದು ಬಾಯ್ತಪ್ಪಿ ಹೇಳಿದ್ರು. ಇದಕ್ಕೆ ವಿಜಯಲಕ್ಷ್ಮಿ ಬೇಸರ ಹೊರಹಾಕಿ ಪೊಲೀಸರಿಗೆ ಪತ್ರ ಬರೆದಿದ್ರು. ಪವಿತ್ರಾ ಗೌಡ, ದರ್ಶನ್ ಪತ್ನಿ ಅಲ್ಲ ಪೊಲೀಸರ ವರದಿಗಳಲ್ಲಿ ಆಕೆಯನ್ನು ದರ್ಶನ್ ಪತ್ನಿ ಎಂದು ಉಲ್ಲೇಖಿಸಬೇಡಿ ಎಂದು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ರು. ಕಾನೂನಿನ ಪ್ರಕಾರ  ನಾನು ದರ್ಶನ್​ ಪತ್ನಿ ಎಂದು ಪತ್ರದಲ್ಲಿ ವಿಜಯಲಕ್ಷ್ಮಿ ವಿವರಣೆ ನೀಡಿದ್ರು. ​<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments