Webdunia - Bharat's app for daily news and videos

Install App

ಬಿಡುಗಡೆಯಾಯಿತು 'ಬಾಳೆ ಬಂಗಾರ' ಸಾಕ್ಷ್ಯ ಚಿತ್ರ

Webdunia
ಸೋಮವಾರ, 30 ಆಗಸ್ಟ್ 2021 (11:22 IST)
ಕನ್ನಡ ಚಿತ್ರರಂಗದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರ ಬದುಕು- ಸಿನಿಮಾ ಮತ್ತು ಸಾಧನೆಗಳ ಮೇಲೆ ಬೆಳಕು ಚೆಲ್ಲುವ “ಬಾಳೆ ಬಂಗಾರ’ ಸಾಕ್ಷ್ಯ ಚಿತ್ರ ಇತ್ತೀಚೆಗೆ ಬಿಡುಗಡೆಯಾಗಿದೆ.

ಭಾರತಿ ವಿಷ್ಣುವರ್ಧನ್ ಅವರ ಅಳಿಯ, ನಟ ಅನಿರುದ್ಧ ಈ ಸಾಕ್ಷ್ಯ ಚಿತ್ರವನ್ನು ನಿರ್ದೇಶಿಸಿ, ತೆರೆಗೆ ತಂದಿದ್ದಾರೆ. ಚಿತ್ರರಂಗದ ಗಣ್ಯರಿಗಾಗಿ ಇತ್ತೀಚೆಗೆ “ಬಾಳೇ ಬಂಗಾರ’ ಸಾಕ್ಷ್ಯ ಚಿತ್ರದ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭದಲ್ಲಿ ಚಿತ್ರರಂಗದ ಅನೇಕರು ಭಾಗಿಯಾಗಿ, ಭಾರತಿ ವಿಷ್ಣುವರ್ಧನ್ ಅವರನ್ನು ಅಭಿನಂದಿಸಿದರು.
ಇದೇ ವೇಳೆ ಮಾತನಾಡಿದ ನಟ ಅನಿರುದ್ಧ, “ಸುಮಾರು ಮೂರು ವರ್ಷಗಳ ಪ್ರಯತ್ನದಿಂದ ಈ ಸಾಕ್ಷ್ಯ ಚಿತ್ರ ನಿರ್ಮಾಣವಾಗಿದೆ. ಇದರಲ್ಲಿ ಅಮ್ಮಾವ್ರ ವೃತ್ತಿ ಬದುಕಿನ ಎಲ್ಲಾ ಮಾಹಿತಿಗಳನ್ನುಕಲೆ ಹಾಕಲಾಗಿದೆ. ಅವರ ವೈವಿಧ್ಯಮಯ ಪಾತ್ರಗಳು, ಅದರ ಅನುಭವಗಳನ್ನು ಅವರ ಮಾತಿನಲ್ಲೇ ಸಂಗ್ರಹಿಸಲಾಗಿದೆ. ಭಾರತಿ ವಿಷ್ಣುವರ್ಧನ್ ಬದುಕು – ಸಾಧನೆಯನ್ನು ಸಮಗ್ರವಾಗಿ ಪರಿಚಯ ಮಾಡಿಸುವ ಕೈಪಿಡಿ “ಬಾಳೇ ಬಂಗಾರ’ ಸಾಕ್ಷ್ಯ ಚಿತ್ರ’ ಎಂದರು.
ತಮ್ಮ ಸಾಕ್ಷ್ಯ ಚಿತ್ರದ ಬಗ್ಗೆ ಮಾತನಾಡಿದ ಭಾರತಿ ವಿಷ್ಣುವರ್ಧನ್, “ನಾನು ಯಾವುದೇ ಅಪೇಕ್ಷೆ, ನಿರೀಕ್ಷೆ ಇಲ್ಲದೆ ಚಿತ್ರರಂಗಕ್ಕೆ ಬಂದವಳು. ಅಂದುಕೊಳ್ಳದೇನೆ ಎಲ್ಲವೂ ನಡೆಯಿತು. “ಬಾಳೇ ಬಂಗಾರ ಸಾಕ್ಷ್ಯ ಚಿತ್ರ, ನನ್ನ ಬದುಕಿನ ವಿವಿಧ ಹಂತಗಳನ್ನು ನಾನೇ ತಿರುಗಿ ನೋಡುವಂತೆ ಮಾಡಿದೆ. ಎಲ್ಲರ ಪ್ರೀತಿ, ಅಭಿಮಾನ, ವಿಶ್ವಾಸ ನನ್ನನ್ನು ಇಲ್ಲಿಯವರೆಗೂ ತಂದು ನಿಲ್ಲಿಸಿದೆ. ನನ್ನ ಸಿನಿಮಾ ಬದುಕನ್ನು ಈ ಸಾಕ್ಷ್ಯ ಚಿತ್ರದಲ್ಲಿ ದಾಖಲಿಸಲು ಅನೇಕರು ತುಂಬ ಶ್ರಮಪಟ್ಟಿದ್ದಾರೆ. ಅವರಿಗೆಲ್ಲ ನಾನು ಕೃತಜ್ಞಳಾಗಿದ್ದೇನೆ’ ಎಂದರು.
ಇನ್ನು ಅಪ್ಪಟ ಕನ್ನಡದ ನಟಿ ಭಾರತಿ ವಿಷ್ಣುವರ್ಧನ್, ಕನ್ನಡವೂ ಸೇರಿದಂತೆ ಆರು ಭಾಷೆಗಳಲ್ಲಿ ಸುಮಾರು ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ಮುಂದಿನ ಸುದ್ದಿ
Show comments