ಪುನೀತ್ ರಾಜ್ಕುಮಾರ್ ಅವರ ಪಾರ್ಥಿವ ಶರೀರವನ್ನು ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದೆ.ಲಕ್ಷಾಂತರ ಅಭಿಮಾನಿಗಳು ಬಂದು ನೆಚ್ಚಿನ ನಟನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಶನಿವಾರ (ಅ.30) ಪೂರ್ತಿ ದಿನ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸ್ಯಾಂಡಲ್ವುಡ್ ಮಾತ್ರವಲ್ಲದೇ ಪರಭಾಷೆಯ ಅನೇಕ ಸೆಲೆಬ್ರಿಟಿಗಳು ಬಂದು ಪುನೀತ್ಗೆ ನಮನ ಸಲ್ಲಿಸುತ್ತಿದ್ದಾರೆ. ಕಂಬನಿ ಮಿಡಿಯುತ್ತ ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ.