Webdunia - Bharat's app for daily news and videos

Install App

ಖ್ಯಾತ ಸಂಗೀತ ನಿರ್ದೇಶಕ ಎ.ಆರ್‌. ರೆಹಮಾನ್ ಆರೋಗ್ಯದಲ್ಲಿ ಏರುಪೇರು: ಚೆನ್ನೈನ ಆಸ್ಪತ್ರೆಗೆ ದಾಖಲು

Sampriya
ಭಾನುವಾರ, 16 ಮಾರ್ಚ್ 2025 (11:43 IST)
Photo Courtesy X
ಚೆನ್ನೈ: ಸಂಗೀತ ನಿರ್ದೇಶಕ, ಗಾಯಕ ಎ.ಆರ್‌. ರೆಹಮಾನ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ರೆಹಮಾನ್ ಅವರನ್ನು ಚೆನ್ನೈ ಗ್ರೀಮ್ಸ್ ರಸ್ತೆಯ ಅಪೋಲೊ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎದೆನೋವಿನ ಹಿನ್ನೆಲೆಯಲ್ಲಿ ಎ.ಆರ್ ರೆಹಮಾನ್ ಅವರಿಗೆ ಇಸಿಜಿ, ಎಕೋಕಾರ್ಡಿಯೋಗ್ರಾಮ್ ಸೇರಿ ವಿವಿಧ ಪರೀಕ್ಷೆಗಳನ್ನು ಮಾಡಲಾಗಿದೆ. ರೆಹಮಾನ್ ಅವರಿಗೆ ಆಂಜಿಯೋಗ್ರಾಮ್ ಮಾಡುವ ಸಾಧ್ಯತೆಯಿದೆ.

ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ 58 ವರ್ಷದ ಎ.ಆರ್ ರೆಹಮಾನ್ ಅವರು ಇತ್ತೀಚೆಗೆ ಪತ್ನಿಯಿಂದ ಡಿವೋರ್ಸ್ ಪಡೆದಿದ್ದರು. ಸುಮಾರು 29 ವರ್ಷಗಳ ದಾಂಪತ್ಯದ ನಂತರ, ಕಳೆದ ವರ್ಷ ನವೆಂಬರ್ ನಲ್ಲಿ ಸೈರಾ ಬಾನು ಮತ್ತು ಎಆರ್ ರೆಹಮಾನ್ ಬೇರ್ಪಡುವುದಾಗಿ ಪ್ರಕಟಿಸಿದ್ದರು. ಮಾಜಿ ಪತ್ನಿ ಸಾಯಿರಾ ಬಾನು ಕೂಡ ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ರೆಹಮಾನ್ ಅವರ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದು, ತಾವು ವೈದ್ಯರೊಂದಿಗೆ ಮಾತನಾಡಿದ್ದು ರೆಹಮಾನ್ ಅವರು ಚೆನ್ನಾಗಿದ್ದಾರೆ, ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗುವರು ಎಂದು ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments