ನಟ ಮತ್ತು ಶಾಸಕ ನಂದಮೂರಿ ಬಾಲಕೃಷ್ಣ ಅವರು ಆರೋಗ್ಯದಲ್ಲಿ ಏರುಪೇರಾಗಿದ್ದು, ಈ ಹಿನ್ನೆಲೆ ಅವರು ಸರ್ಕಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗಿಲ್ಲ ಎಂದು ಆಂಧ್ರಪ್ರದೇಶ ಸಚಿವ ಪಯ್ಯಾವುಲ ಕೇಶವ್ ಬಹಿರಂಗಪಡಿಸಿದ್ದಾರೆ.
ಈ ವಿಚಾರ ತಿಳಿದು ಸಾಮಾಜಿಕ ಜಾಲತಾಣಗಳಲ್ಲಿ ಬಾಲಕೃಷ್ಣ ಅವರ ಆರೋಗ್ಯ ಸ್ಥಿತಿ ಹಾಗೂ ಚಿಕಿತ್ಸೆ ಕುರಿತು ಅಭಿಮಾನಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಬಾಲಕೃಷ್ಣ ಅವರಿಂದ ಅಧಿಕೃತ ಹೇಳಿಕೆಗಾಗಿ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಬಾಲಕೃಷ್ಣ ಅವರ ಆರೋಗ್ಯದ ಬಗ್ಗೆ ಅಧಿಕೃತ ಮಾಹಿತಿಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಸ್ಟಾರ್ ಎಂಎಲ್ಎ ಇತ್ತೀಚೆಗೆ ನಾಲ್ಕು ಹಿಟ್ ಚಲನಚಿತ್ರಗಳನ್ನು ವಿತರಿಸಿದರು ಮತ್ತು ಹೆಚ್ಚಿನ ಅನುಯಾಯಿಗಳನ್ನು ಹೊಂದಿದ್ದಾರೆ, ಇದು ಕಳವಳವನ್ನು ಹೆಚ್ಚಿಸುತ್ತದೆ.
ತೆಲುಗು ಸಿನಿಮಾ ರಂಗದ ಖ್ಯಾತ ನಟನಾಗಿರುವ ಬಾಲಕೃಷ್ಣ ಅವರು ನಿರ್ಮಪಕರಾಗಿ, ರಾಜಕೀಯದಲ್ಲೂ ಗುರುತಿಸಿಕೊಂಡಿದ್ದಾರೆ.