ರೇಣುಕಾಸ್ವಾಮಿ ಪ್ರಕರಣ: ದರ್ಶನ್‌, ಪವಿತ್ರಾ ಗೌಡಗೆ ಮತ್ತೇ 5 ದಿನ ಪೊಲೀಸ್‌ ಕಸ್ಟಡಿ

sampriya
ಶನಿವಾರ, 15 ಜೂನ್ 2024 (19:07 IST)
Photo By X
ಬೆಂಗಳೂರು:  ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಐದು ದಿನಗಳ ಪೊಲೀಸ್‌ ಕಸ್ಟಡಿ ಅವಧಿ ಮುಗಿದಿದ್ದರಿಂದ ದರ್ಶನ್, ಪವಿತ್ರಾ ಗೌಡ ಸೇರಿದಂತೆ 16 ಮಂದಿ ಆರೋಪಿಗಳನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ ಹಾಜರುಪಡಿಸಲಾಯಿತು.

ಪ್ರಕರಣ ಸಂಬಂಧ ಇಂದು 42ನೇ ಎಸಿಎಂಎಂ ನ್ಯಾಯಾಲಯ ವಿಚಾರಣೆ ನಡೆಸಿತು. ಕೊಲೆ ಆರೋಪ ಎದುರಿಸುತ್ತಿರುವವರ ಪೈಕಿ 12 ಆರೋಪಿಗಳನ್ನು 5 ದಿನಗಳ ಕಾಲ ಮತ್ತೆ ಪೊಲೀಸ್‌ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ವೇಳೆ ದರ್ಶನ್ ಹಾಗೂ ಪವಿತ್ರಾ ಗೌಡ ಪರ ವಕೀಲರು ತಮ್ಮ ವಾದವನ್ನು ಮಂಡಿಸಿದ್ದರು.

ಪವಿತ್ರಾ ಗೌಡ ಪರ ವಕೀಲರು ನಾರಾಯಣಸ್ವಾಮಿ ಹಾಗೂ ದರ್ಶನ್ ಪರ ವಕೀಲರಾದ ಅನಿಲ್ ಬಾಬು ನ್ಯಾಯಾಧೀಶರ ಮುಂದೆ ನ್ಯಾಯಾಂಗ ಬಂಧನ ನೀಡಬೇಕು ಎಂದು ವಾದವನ್ನು ಮಂಡಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಕೂಡ ಇನ್ನೂ ಆರೋಪಿಗಳ ವಿಚಾರಣೆ ನಡೆಯಬೇಕಿದೆ. ಹೀಗಾಗಿ ಕಾಲಾವಕಾಶ ಬೇಕು. ಈ ಕಾರಣಕ್ಕಾಗಿ ಇನ್ನೂ ಎಂಟು ದಿನಗಳ ಕಾಲ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments