Select Your Language

Notifications

webdunia
webdunia
webdunia
शुक्रवार, 20 दिसंबर 2024
webdunia

Renukaswamy Case: ಮಧ್ಯಂತರ ಜಾಮೀನು ಅವಧಿ ವಿಸ್ತರಣೆ, ದರ್ಶನ್‌ಗೆ ತಾತ್ಕಾಲಿಕ ರಿಲೀಫ್‌

Renukaswamy Case, Actor Darshan Thoogudeep Health, Darshan Extension of Interim Bail

Sampriya

ಬೆಂಗಳೂರು , ಸೋಮವಾರ, 9 ಡಿಸೆಂಬರ್ 2024 (17:29 IST)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ2 ಆರೋಪಿಯಾಗಿರುವ ನಟ ದರ್ಶನ್‌ ಅವರ ಮಧ್ಯಂತರ ಜಾಮೀನು ಅವಧಿ ವಿಸ್ತರಣೆಯಾಗುವ ಮೂಲಕ ನಟನಿಗೆ ಬಿಗ್‌ ರಿಲೀಫ್ ಸಿಕ್ಕಿದೆ.  

ತೀವ್ರವಾದ ಬೆನ್ನು ನೋವು ಸಲುವಾಗಿ ಮಧ್ಯಂತರ ಜಾಮೀನು ಅಡಿಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್‌ಗೆ ಇದೀಗ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.  ಇಂದು ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.  

ದರ್ಶನ್ ಅವರ ಪರವಾಗಿ ವಕೀಲ ಸಿ.ವಿ. ನಾಗೇಶ್ ಹಾಗೂ ಎಸ್​ಪಿಪಿ ಪ್ರಸನ್ನ ಕುಮಾರ್​ ವಾದ ಪ್ರತಿವಾದ ಮಂಡಿಸಿದರು. ದರ್ಶನ್ ಪರ ವಕೀಲರು ಮಧ್ಯಂತರ ಜಾಮೀನು ಅವಧಿ ವಿಸ್ತರಿಸಲು ಮನವಿ ಮಾಡಿದರು. ಈವರೆಗೂ ದರ್ಶನ್ ಯಾಕೆ ಸರ್ಜರಿ ಮಾಡಿಸಿಲ್ಲ ಎಂಬ ಪ್ರಶ್ನೆಗೆ ಈ ಮೊದಲು ನಡೆದ ವಿಚಾರಣೆಯಲ್ಲಿ ಸಿ.ವಿ. ನಾಗೇಶ್ ಅವರು ಕಾರಣ ನೀಡಿದ್ದರು. ನಟನಿಗೆ ರಕ್ತದೊತ್ತಡ ವ್ಯತ್ಯಾಸ ಆಗುತ್ತಿರುವುದರಿಂದ ಶಸ್ತ್ರ ಚಿಕಿತ್ಸೆ ಇನ್ನೂ ನಡೆಸಿಲ್ಲ ಎಂದು ಸಿ.ವಿ. ನಾಗೇಶ್ ಹೇಳಿದ್ದರು.

ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದ ನಟ ದರ್ಶನ್‌ಗೆ ತೀವ್ರವಾದ ಬೆನ್ನುನೋವು ಕಾಣಿಸಿಕೊಂಡಿತು. ಅಲ್ಲಿಯೇ ಅವರಿಗೆ ಕೆಲವು ಪರೀಕ್ಷೆಗಳನ್ನು ಮಾಡಿದ ವೈದ್ಯರು ಶಸ್ತ್ರ ಚಿಕಿತ್ಸೆಗೆ ಸಲಹೆ ನೀಡಿದ್ದರು. ಎಲ್ಲ ವರದಿಗಳನ್ನು ಆಧರಿಸಿ ದರ್ಶನ್​ಗೆ 6 ವಾರಗಳ ಮಧ್ಯಂತರ ಜಾಮೀನು ನೀಡಲಾಗಿತ್ತು. ಅವರ ಜಾಮೀನು ಅವಧಿ ಡಿಸೆಂಬರ್​ 11ಕ್ಕೆ ಅಂತ್ಯವಾಗುವ ಹಿನ್ನೆಲೆಯಲ್ಲಿ ವಿಸ್ತರಣೆಗಾಗಿ ಮನವಿ ಮಾಡಲಾಗಿತ್ತು. ಈಗ ಜಾಮೀನು ಅವಧಿ ವಿಸ್ತರಣೆ ಆಗಿದ್ದು, ದರ್ಶನ್ ಸದ್ಯಕ್ಕೆ ನಿಟ್ಟುಸಿರು ಬಿಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆಯ ಮಧುರ ಕ್ಷಣಗಳ ಫೋಟೋ ಹಂಚಿಕೊಂಡ ನಾಗಾಚೈತನ್ಯ