Webdunia - Bharat's app for daily news and videos

Install App

Renukaswamy Case: ಮಧ್ಯಂತರ ಜಾಮೀನು ಅವಧಿ ವಿಸ್ತರಣೆ, ದರ್ಶನ್‌ಗೆ ತಾತ್ಕಾಲಿಕ ರಿಲೀಫ್‌

Sampriya
ಸೋಮವಾರ, 9 ಡಿಸೆಂಬರ್ 2024 (17:29 IST)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ2 ಆರೋಪಿಯಾಗಿರುವ ನಟ ದರ್ಶನ್‌ ಅವರ ಮಧ್ಯಂತರ ಜಾಮೀನು ಅವಧಿ ವಿಸ್ತರಣೆಯಾಗುವ ಮೂಲಕ ನಟನಿಗೆ ಬಿಗ್‌ ರಿಲೀಫ್ ಸಿಕ್ಕಿದೆ.  

ತೀವ್ರವಾದ ಬೆನ್ನು ನೋವು ಸಲುವಾಗಿ ಮಧ್ಯಂತರ ಜಾಮೀನು ಅಡಿಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್‌ಗೆ ಇದೀಗ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.  ಇಂದು ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.  

ದರ್ಶನ್ ಅವರ ಪರವಾಗಿ ವಕೀಲ ಸಿ.ವಿ. ನಾಗೇಶ್ ಹಾಗೂ ಎಸ್​ಪಿಪಿ ಪ್ರಸನ್ನ ಕುಮಾರ್​ ವಾದ ಪ್ರತಿವಾದ ಮಂಡಿಸಿದರು. ದರ್ಶನ್ ಪರ ವಕೀಲರು ಮಧ್ಯಂತರ ಜಾಮೀನು ಅವಧಿ ವಿಸ್ತರಿಸಲು ಮನವಿ ಮಾಡಿದರು. ಈವರೆಗೂ ದರ್ಶನ್ ಯಾಕೆ ಸರ್ಜರಿ ಮಾಡಿಸಿಲ್ಲ ಎಂಬ ಪ್ರಶ್ನೆಗೆ ಈ ಮೊದಲು ನಡೆದ ವಿಚಾರಣೆಯಲ್ಲಿ ಸಿ.ವಿ. ನಾಗೇಶ್ ಅವರು ಕಾರಣ ನೀಡಿದ್ದರು. ನಟನಿಗೆ ರಕ್ತದೊತ್ತಡ ವ್ಯತ್ಯಾಸ ಆಗುತ್ತಿರುವುದರಿಂದ ಶಸ್ತ್ರ ಚಿಕಿತ್ಸೆ ಇನ್ನೂ ನಡೆಸಿಲ್ಲ ಎಂದು ಸಿ.ವಿ. ನಾಗೇಶ್ ಹೇಳಿದ್ದರು.

ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದ ನಟ ದರ್ಶನ್‌ಗೆ ತೀವ್ರವಾದ ಬೆನ್ನುನೋವು ಕಾಣಿಸಿಕೊಂಡಿತು. ಅಲ್ಲಿಯೇ ಅವರಿಗೆ ಕೆಲವು ಪರೀಕ್ಷೆಗಳನ್ನು ಮಾಡಿದ ವೈದ್ಯರು ಶಸ್ತ್ರ ಚಿಕಿತ್ಸೆಗೆ ಸಲಹೆ ನೀಡಿದ್ದರು. ಎಲ್ಲ ವರದಿಗಳನ್ನು ಆಧರಿಸಿ ದರ್ಶನ್​ಗೆ 6 ವಾರಗಳ ಮಧ್ಯಂತರ ಜಾಮೀನು ನೀಡಲಾಗಿತ್ತು. ಅವರ ಜಾಮೀನು ಅವಧಿ ಡಿಸೆಂಬರ್​ 11ಕ್ಕೆ ಅಂತ್ಯವಾಗುವ ಹಿನ್ನೆಲೆಯಲ್ಲಿ ವಿಸ್ತರಣೆಗಾಗಿ ಮನವಿ ಮಾಡಲಾಗಿತ್ತು. ಈಗ ಜಾಮೀನು ಅವಧಿ ವಿಸ್ತರಣೆ ಆಗಿದ್ದು, ದರ್ಶನ್ ಸದ್ಯಕ್ಕೆ ನಿಟ್ಟುಸಿರು ಬಿಟ್ಟಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments