Publish Date: Thu, 02 Jul 2026 (09:21 IST)
Updated Date: Thu, 02 Jul 2026 (09:23 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ಗೆ ಟ್ವಿಸ್ಟ್ ಸಿಕ್ಕಿದೆ. ದರ್ಶನ್ ಅಭಿಮಾನಿಗಳು ಎನ್ನಲಾದ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ನಡೆಯುತ್ತಿದೆ. ಮೊನ್ನೆಯಷ್ಟೇ ಕೋರ್ಟ್ ನಲ್ಲಿ ಓರ್ವ ಸಾಕ್ಷಿದಾರ ನನಗೆ ಓರ್ವ ವ್ಯಕ್ತಿ ತಾನು ಹೇಳಿದಂತೆ ಸಾಕ್ಷಿ ನುಡಿಯುವಂತೆ ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದರು. ಇದನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿ ಆತ ಹೇಳಿದ ವ್ಯಕ್ತಿಗಳನ್ನು ವಶಕ್ಕೆ ಪಡೆಯುವಂತೆ ಸೂಚಿಸಿತ್ತು.
ನ್ಯಾಯಾಲಯದ ಸೂಚನೆ ಮೇರೆಗೆ ಕಾಮಾಕ್ಷಿಪಾಳ್ಯ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ದರ್ಶನ್ ಅಭಿಮಾನಿಗಳಾದ ಪುನೀತ್, ಸುಹಾಸ್ ಮತ್ತು ವೇಣು ಬಂಧಿತರು. ಇವರು ಸಾಕ್ಷಿ ಸಂದೀಪ್ ಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದಾರೆ.
ಈ ಮೂವರು ಡಿ ಕಮ್ಯುನಿಟಿ ಎಂಬ ಫೇಸ್ ಬುಕ್ ಪೇಜ್ ನಡೆಸುತ್ತಿದ್ದಾರೆ. ಇವರು ಮಾಡಿದ ಕೆಲಸಕ್ಕೆ ಈಗ ದರ್ಶನ್ ಮತ್ತು ಇತರೆ ಆರೋಪಿಗಳಿಗೆ ಸಂಕಷ್ಟ ಎದುರಾಗಲಿದೆ. ಸಾಕ್ಷಿಗಳಿಗೆ ಬೆದರಿಕೆ ಹಾಕುವುದು, ಸಾಕ್ಷ್ಯ ತಿರುವಲು ಒತ್ತಡ ಹೇರುವುದು, ಆಮಿಷವೊಡ್ಡುವುದು ಕಾನೂನಿಗೆ ವಿರುದ್ಧವಾಗಿದೆ. ಇದರ ಪರಿಣಾಮ ಆರೋಪಿಗಳ ಮೇಲಾಗುತ್ತದೆ. ಹೀಗಾಗಿ ಅಭಿಮಾನಿಗಳು ಮಾಡಿದ ಕೆಲಸದಿಂದ ದರ್ಶನ್ ಸಂಕಷ್ಟಕ್ಕೆ ಸಿಲುಕುವ ಆತಂಕ ಎದುರಾಗಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ