Select Your Language

Notifications

webdunia
webdunia
webdunia
webdunia

ರೇಣುಕಾಸ್ವಾಮಿ ಹತ್ಯೆ ಪ್ರಕರಣ: 7ಆರೋಪಿಗಳ ಜಾಮೀನು ಭವಿಷ್ಯ ನಾಳೆ ನಿರ್ಧಾರ, ದರ್ಶನ್‌ ಪಾಲಿಗೆ ಬಿಗ್‌ ಡೇ

Actor Darshana Thoogudeepa, Renukaswamy Case, Darsha Operation,

Sampriya

ಬೆಂಗಳೂರು , ಗುರುವಾರ, 12 ಡಿಸೆಂಬರ್ 2024 (19:52 IST)
Photo Courtesy X
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿ ನಟ ದರ್ಶನ್, ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ಭವಿಷ್ಯ ನಾಳೆ ನಿರ್ಧಾರವಾಗಲಿದೆ.

ಜಾಮೀನು  ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ದೀರ್ಘ ಸಮಯದಿಂದ ನಡೆಯುತ್ತಿದ್ದು, ನಾಳೆ ಪ್ರಕರಣದ ವಿಚಾರಣೆ  ನ್ಯಾ. ವಿಶ್ವಜಿತ್ ಶೆಟ್ಟಿ ಪೀಠವು ನಡೆಸಿ ನಾಳೆ ಮಧ್ಯಾಹ್ನ 2:30ಕ್ಕೆ ಆದೇಶ ಹೊರಡಿಸಲಿದೆ. ಈ ಮೂಲಕ ಚಿಕಿತ್ಸೆ ಸಂಬಂಧ ಆಸ್ಪತ್ರೆಯಲ್ಲಿ ನಟ ದರ್ಶನ್‌ಗೆ ಭವಿಷ್ಯದ ಪ್ರಮುಖ ದಿನವಾಗಿದೆ.

ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್, ಪ್ರದೋಷ್ ಜಾಮೀನು ಆದೇಶ ನಾಳೆಗೆ ಹೊರಬೀಳಲಿದೆ.

ಬೆನ್ನುನೋವಿನ ಕಾರಣ ಮಧ್ಯಂತರ ಜಾಮೀನಿನ ಮೇಲೆ ದರ್ಶನ್ ಜೈಲಿಂದ ಹೊರಗಿದ್ದಾರೆ. ಶಸ್ತ್ರಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ, ಇದುವರೆಗೂ ಆಪರೇಷನ್ ಆಗಿಲ್ಲ ಎಂದು ಹೇಳಲಾಗುತ್ತಿದೆ.  ಒಟ್ಟಾರೆ ನಾಳೆ ಜಾಮೀನು ತೀರ್ಪು ಹೊರಬರಲಿದ್ದು, ನಾಳೆ ದರ್ಶನ್​ ಪಾಲಿಗೆ ಶುಭ ಶುಕ್ರವಾರವಾಗುತ್ತಾ ಅಥವಾ ಬ್ಲ್ಯಾಕ್ ಫ್ರೈಡೇ ಆಗುತ್ತಾ ಅನ್ನೋದನ್ನು ಕಾದು ನೋಡಬೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪುಷ್ಪ 2 ಯಶಸ್ವಿನ ಖುಷಿಯಲ್ಲಿರುವ ಅಲ್ಲು ಅರ್ಜುನ್ ಕೋರ್ಟ್ ಮೆಟ್ಟಿಲೇರಿದ್ದೇಕೆ