Webdunia - Bharat's app for daily news and videos

Install App

ನಟ ದರ್ಶನ್ ಜಾಮೀನಿಗೆ ಕಂಟಕ ತರುತ್ತಾರಾ ಪೊಲೀಸರು: ರೇಣುಕಾಸ್ವಾಮಿ ತಂದೆಯ ಆಗ್ರಹವೇನು

Krishnaveni K
ಶನಿವಾರ, 14 ಡಿಸೆಂಬರ್ 2024 (11:06 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಗೆ ನಿನ್ನೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಆದರೆ ಅವರ ವಿರುದ್ಧ ಪೊಲೀಸರು ಸುಪ್ರೀಂಕೋರ್ಟ್ ಗೆ ಹೋಗಲಿದ್ದಾರೆಯೇ ಎಂಬ ಅನುಮಾನ ಮೂಡಿದೆ.

ನಟ ದರ್ಶನ್ ಗೆ ಈಗಾಗಲೇ ಬೆನ್ನು ನೋವಿನ ನೆಪದಲ್ಲಿ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇದರ ಅವಧಿಯನ್ನು ಇತ್ತೀಚೆಗಷ್ಟೇ ವಿಸ್ತರಿಸಿತ್ತು. ಆದರೆ ಈಗ ಹೈಕೋರ್ಟ್ ಮಾಮೂಲಿ ಜಾಮೀನು ಮಂಜೂರು ಮಾಡಿರುವುದರಿಂದ ದರ್ಶನ್ ಆಂಡ್ ಗ್ಯಾಂಗ್ ನಿರಾಳವಾಗಿದ್ದಾರೆ.

ಆದರೆ ದರ್ಶನ್ ಗೆ ಈ ಹಿಂದೆ ಮಧ್ಯಂತರ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆಯಾಗಬೇಕೆಂದು ಜಾಮೀನು ಪಡೆದಿದ್ದ ದರ್ಶನ್ ಇದುವರೆಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ ಎನ್ನುವುದು ಪೊಲೀಸರ ವಾದವಾಗಿತ್ತು.

ಆದರೆ ಈಗ ಮಾಮೂಲಿ ಜಾಮೀನು ಮಂಜೂರು ಮಾಡಿರುವುದರ ವಿರುದ್ಧವೂ ಪೊಲೀಸರು ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆಯಾ ಎಂದು ಪ್ರಶ್ನೆ ಮೂಡಿದೆ. ದರ್ಶನ್ ಗೆ ಜಾಮೀನು ಮಂಜೂರು ಮಾಡಿರುವುದರ ಬಗ್ಗೆ ಪ್ರತಿಕ್ರಿಯಿಸಿದ್ದ ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯ ನಮ್ಮ ಮಗನಿಗೆ ನ್ಯಾಯ ಸಿಗಬೇಕು ಎಂಬುದೇ ನಮ್ಮ ಉದ್ದೇಶ. ದರ್ಶನ್ ಇರಲಿ, ಯಾರೇ ಇರಲಿ ನಮ್ಮ ಮನೆಗೆ ಬರುವುದು ನಮಗೆ ಬೇಕಿಲ್ಲ. ನಮಗೆ ಕೋರ್ಟ್, ಸರ್ಕಾರದ ಮೇಲೆ ನಂಬಿಕೆಯಿದೆ. ಈ ಮೊದಲು ಮಧ್ಯಂತರ ಜಾಮೀನು ಮಂಜೂರಾದಾಗಲೂ ಸರ್ಕಾರ ತಕ್ಷಣವೇ ಸುಪ್ರೀಂಕೋರ್ಟ್ ಮೇಲ್ಮನವಿ ಸಲ್ಲಿಸಿತ್ತು. ಈಗಲೂ ಸಲ್ಲಿಸುತ್ತದೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments