Publish Date: Wed, 12 Apr 2023 (08:40 IST)
Updated Date: Wed, 12 Apr 2023 (08:48 IST)
ಬೆಂಗಳೂರು: ನಟ ಕಿಚ್ಚ ಸುದೀಪ್ ಗೆ ಇತ್ತೀಚೆಗೆ ಬೆದರಿಕೆ ಪತ್ರಗಳು ಬಂದಿದ್ದವು. ಈ ಸಂಬಂಧ ಪೊಲೀಸರಿಗೂ ದೂರು ನೀಡಲಾಗಿದ್ದು ತನಿಖೆ ನಡೆಸಲಾಗುತ್ತಿದೆ.
ಈ ನಡುವೆ ಸುದೀಪ್ ಆಪ್ತ ಜ್ಯಾಕ್ ಮಂಜು ಅವರಿಗೆ ಜೀವ ಬೆದರಿಕೆಯಿದ್ದು, ಗನ್ ಮ್ಯಾನ್ ನೀಡಬೇಕೆಂದು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
ಸುದೀಪ್ ಗೆ ಬಂದ ಬೆದರಿಕೆ ಪತ್ರದಲ್ಲಿ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು. ಸುದೀಪ್ ಬಿಜೆಪಿಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ ಅವರಿಗೆ ಈ ಪತ್ರಗಳು ಬಂದಿದ್ದವು.
Krishnaveni K
Publish Date: Wed, 12 Apr 2023 (08:40 IST)
Updated Date: Wed, 12 Apr 2023 (08:48 IST)