Publish Date: Sat, 02 May 2026 (19:02 IST)
Updated Date: Sat, 02 May 2026 (19:04 IST)
ನವದೆಹಲಿ: ಸ್ಯಾಂಡಲ್ ವುಡ್ ನಟ, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇಂದು ಕೇಂದ್ರ ಗೃಹಸಚಿವ ಅಮಿತ್ ಶಾರನ್ನು ಭೇಟಿ ಮಾಡಿದ್ದಾರೆ.
ಸಾಮಾನ್ಯವಾಗಿ ಗೃಹಸಚಿವ ಅಮಿತ್ ಶಾ ಸಿನಿಮಾ ಸಂಬಂಧಿಸಿದ ಕಾರ್ಯಕ್ರಮಗಳಿಂದ ಸ್ವಲ್ಪ ದೂರವೇ. ಆದರೆ ಇದೀಗ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಹೊಸ್ತಿಲಲ್ಲಿ ನಟ ರಿಷಬ್ ಶೆಟ್ಟಿ ಮತ್ತು ಅಮಿತ್ ಶಾ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.
ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಈ ಭೇಟಿ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿರುವ ರಿಷಬ್ ಶೆಟ್ಟಿ ಮಾನ್ಯ ಗೃಹ ಸಚಿವರಾದ ಶ್ರೀ ಅಮಿತ್ ಶಾಜಿ ಅವರನ್ನು ಭೇಟಿಯಾಗುವ ಸೌಭಾಗ್ಯ ಸಿಕ್ಕಿತು. ಅವರು ಕಾಂತಾರ ಮತ್ತು ಕಾಂತಾರ ಅಧ್ಯಾಯ 1 ಕ್ಕೆ ತಮ್ಮ ಮೆಚ್ಚುಗೆಯ ಮಾತುಗಳನ್ನು ಹಂಚಿಕೊಂಡಾಗ ಅದು ನನ್ನ ಅತ್ಯಂತ ಸ್ಮರಣೀಯ ಕ್ಷಣಗಳಲ್ಲಿ ಒಂದಾಯಿತು. ನನ್ನ ಮುಂಬರುವ ಯೋಜನೆಗಳನ್ನು ಅವರೊಂದಿಗೆ ಚರ್ಚಿಸುವುದರಲ್ಲಿ ನನಗೆ ಅದ್ಭುತ ಸಮಯವಿತ್ತು. ಅವರು ನಮ್ಮ ಇತಿಹಾಸ, ಸಂಸ್ಕೃತಿ, ಕಲೆ ಮತ್ತು ಚಲನಚಿತ್ರ ನಿರ್ಮಾಣದ ಬಗ್ಗೆ ತಮ್ಮ ಆಳವಾದ ಜ್ಞಾನ ಮತ್ತು ತಿಳುವಳಿಕೆಯನ್ನು ಹಂಚಿಕೊಳ್ಳಲು ಪ್ರಾರಂಭಿಸಿದಾಗ ನಾನು ನಿಜವಾಗಿಯೂ ಸಂತೋಷಪಟ್ಟೆ ಎಂದು ನಾನು ಹೇಳಲೇಬೇಕು ಎಂದಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ