ತೆಲುಗು ಸಿನಿಮಾ ಶೂಟಿಂಗ್ ನಡುವೆ ಕಾಂತಾರ ಮರೆತರಾ ರಿಷಬ್ ಶೆಟ್ಟಿ: ಇಲ್ಲಿದೆ ಎಲ್ಲದಕ್ಕೂ ಉತ್ತರ

Krishnaveni K
ಬುಧವಾರ, 6 ನವೆಂಬರ್ 2024 (15:53 IST)
ಬೆಂಗಳೂರು: ಇತ್ತೀಚೆಗಷ್ಟೇ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ತೆಲುಗು ಸಿನಿಮಾದಲ್ಲಿ ನಟಿಸಲಿರುವ ಸುದ್ದಿ ಕೊಟ್ಟಿದ್ದರು. ಇದರ ನಡುವೆ ಕಾಂತಾರ ಚಾಪ್ಟರ್ 1 ಮರೆತುಬಿಟ್ಟರಾ ಎಂದು ಅಭಿಮಾನಿಗಳಿಗೆ ಅನುಮಾನ ಮೂಡಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.

ಕಾಂತಾರ ಸೂಪರ್ ಹಿಟ್ ಆದ ಮೇಲೆ ರಿಷಬ್ ಶೆಟ್ಟಿಗೆ ಪರಭಾಷೆಗಳಿಂದಲೂ ಬೇಡಿಕೆ ಹೆಚ್ಚಾಗಿತ್ತು. ಆದರೆ ಕಳೆದ ಒಂದು ವರ್ಷಗಳಿಂದ ಅವರು ಕೇವಲ ಕಾಂತಾರ ಚಾಪ್ಟರ್ 1 ರ ತಯಾರಿಯಲ್ಲಿ ತೊಡಗಿಸಿಕೊಂಡಿದ್ದರು. ಬೇರೆ ಭಾಷೆಗಳತ್ತ ಹೋಗಲ್ಲ ಎಂದೇ ನಿಯಮ ಪಾಲಿಸಿಕೊಂಡು ಬಂದಿದ್ದರು.

ಈ ನಡುವೆ ಅವರು ತೆಲುಗಿನ ಜೈ ಹನುಮಾನ್ ಸಿನಿಮಾದಲ್ಲಿ ನಟಿಸುತ್ತಿರುವ ಸುದ್ದಿ ಕೊಟ್ಟಿದ್ದಾರೆ. ಇತ್ತೀಚೆಗೆ ದೀಪಾವಳಿ ಸಂದರ್ಭದಲ್ಲಿ ರಿಷಬ್ ಆಂಜನೇಯನ ಪಾತ್ರದಲ್ಲಿರುವ ಫಸ್ಟ್ ಲುಕ್ ಕೂಡಾ ಬಿಡುಗಡೆಯಾಗಿತ್ತು. ಅವರ ಈ ಪೋಸ್ಟರ್ ನೋಡಿದ ಮೇಲೆ ಕಾಂತಾರ ಸಿನಿಮಾ ಇನ್ನೂ ಮುಂದೂಡಿಕೆಯಾಗಬಹುದೇ ಎಂಬ ಅನುಮಾನ ಅಭಿಮಾನಿಗಳನ್ನು ಕಾಡಿತ್ತು.

ಆದರೆ ಈಗ ಕಾಂತಾರ ಸಿನಿಮಾ ಶೂಟಿಂಗ್ ನಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಬಂದಿದೆ. ಮುಂದಿನ 60 ದಿನಗಳ ಕಾಲ ನಿರಂತರವಾಗಿ ಕಾಂತಾರ ಚಾಪ್ಟರ್ 1 ಶೂಟಿಂಗ್ ನಲ್ಲಿ ರಿಷಬ್ ಭಾಗಿಯಾಗಲಿದ್ದಾರಂತೆ. ಈಗಾಗಲೇ ಕಾಂತಾರ ಚಾಪ್ಟರ್ 1 ಸಿನಿಮಾದ ಕೆಲವು ಭಾಗದ ಚಿತ್ರೀಕರಣ ನಡೆಸಲಾಗಿದೆ. ಇದೀಗ ಪ್ರಮುಖ ದೃಶ್ಯಗಳ ಚಿತ್ರೀಕರಣ ಮಾಡಿ ಮುಗಿಸಲಿದ್ದಾರೆ. ಮುಂದಿನ ವರ್ಷ ಚಿತ್ರ ತೆರೆಗೆ ತರುವ ಯೋಜನೆ ಚಿತ್ರತಂಡದ್ದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಮುಂದಿನ ಸುದ್ದಿ
Show comments