Publish Date: Tue, 06 Oct 2020 (10:25 IST)
Updated Date: Tue, 06 Oct 2020 (10:26 IST)
ಬೆಂಗಳೂರು: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾ ಬಳಿಕ ಗಡಿನಾಡ ಶಾಲೆಗಳ ದುಸ್ಥಿತಿ ಬಗ್ಗೆ ಬೆಳಕು ಚೆಲ್ಲುವ ಪ್ರಯತ್ನ ಮಾಡಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಈಗ ಆಸ್ಪತ್ರೆಯೊಂದರ ಅಭಿವೃದ್ಧಿಗೆ ಮುಂದಾಗಿದ್ದಾರೆ.
ತಮ್ಮ ತವರು ಉಡುಪಿ ಜಿಲ್ಲೆಯ ಅಜ್ಜರಕಾಡು ಸರ್ಕಾರಿ ಆಸ್ಪತ್ರೆ ಅಭಿವೃದ್ಧಿಗೆ ಕೈ ಜೋಡಿಸಿದ್ದಾರೆ. 60 ವರ್ಷಗಳಷ್ಟು ಹಳೆಯ ಆಸ್ಪತ್ರೆ ಆಧುನಿಕ ಸೌಲಭ್ಯಗಳಿಲ್ಲದೇ ದುಸ್ಥಿತಿಯಲ್ಲಿದೆ. ಈ ಆಸ್ಪತ್ರೆಗೆ ಹೈಟೆಕ್ ಸ್ಪರ್ಶ ನೀಡಲು ರಿಷಬ್ ಸಹಾಯ ಮಾಡಲಿದ್ದಾರೆ. ಅವರ ಸಾಮಾಜಿಕ ಕೆಲಸಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.