Select Your Language

Notifications

webdunia
webdunia
webdunia
webdunia

ವಿಷ್ಣು ಸಮಾಧಿ ಏಕಾಏಕಿ ತೆರವಿಗೆ ರಿಷಭ್‌ ಶೆಟ್ಟಿ ಖಂಡನೆ: ಕಲಾಸೇವೆಗೆ ಅಗೌರವ ಎಂದು ಡಿವೈನ್ ಸ್ಟಾರ್‌ ಬೇಸರ

Abhiman Studio, Sahasasimha Vishnuvardhan Samadhi, Divine Star Rishabh Shetty

Sampriya

ಬೆಂಗಳೂರು , ಭಾನುವಾರ, 10 ಆಗಸ್ಟ್ 2025 (10:33 IST)
Photo Credit X
ಬೆಂಗಳೂರು: ನಗರದ ಅಭಿಮಾನ್ ಸ್ಟುಡಿಯೊದಲ್ಲಿದ್ದ ಸಾಹಸಸಿಂಹ ವಿಷ್ಣುವರ್ಧನ್ ಅವರ ಸಮಾಧಿಯನ್ನು ಏಕಾಏಕಿ ತೆರವು ಮಾಡಿರುವ ಕ್ರಮವನ್ನು ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ತೀವ್ರವಾಗಿ ಖಂಡಿಸಿದ್ದಾರೆ.

ವಿಷ್ಣುವರ್ಧನ್‌ ಅವರ ಅಂತ್ಯಸಂಸ್ಕಾರವನ್ನು 2009ರಲ್ಲಿ ಅಭಿಮಾನ್‌ ಸ್ಟುಡಿಯೊದಲ್ಲಿ ನೆರವೇರಿಸಲಾಗಿತ್ತು. ಬಾಲಣ್ಣ ಅವರ ಕುಟುಂಬದವರು ಕೋರ್ಟ್ ಮೊರೆ ಹೋಗಿದ್ದರಿಂದ ಕೋರ್ಟ್ ಆದೇಶದ ಮೇರೆಗೆ ಸಮಾಧಿ ತೆರವು ಮಾಡಲಾಗಿದೆ.

ಈ ಕುರಿತು ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಡಾ. ವಿಷ್ಣುವರ್ಧನ್ ಸರ್ ಅವರ ಸ್ಮಾರಕದ ವಿಚಾರದಲ್ಲಿ ನಡೆದಿರುವ ಬೆಳವಣಿಗೆ ಖಂಡನೀಯ. ಅವರನ್ನು ಹೃದಯಪೂರ್ವಕವಾಗಿ ಆರಾಧಿಸುವ ಪ್ರತಿಯೊಬ್ಬ ಅಭಿಮಾನಿಗೂ ಇದು ಅತೀವ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ.

ನಾಡಿನ ಮೇರು ನಟರೊಬ್ಬರ ವಿಚಾರದಲ್ಲಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿರುವುದು ಅವರ ವ್ಯಕ್ತಿತ್ವ ಮತ್ತು ಕಲಾಸೇವೆಗೆ ಅಗೌರವ ತಂದಂತಾಗಿದೆ ಎಂದೂ ರಿಷಭ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಅಭಿಮಾನ್ ಸ್ಟುಡಿಯೊದಲ್ಲಿದ್ದ ನಟ ವಿಷ್ಣುವರ್ಧನ್ ಅವರ ಸಮಾಧಿಯನ್ನು ಶುಕ್ರವಾರ ಮಧ್ಯಾಹ್ನ ತೆರವು ಮಾಡಿರುವ ಕ್ರಮವನ್ನು ಖಂಡಿಸಿ ವಿಷ್ಣುವರ್ಧನ್‌ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಬಿಡುಗಡೆ ಮಾಡಿದರು. ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಹೆಚ್ಚಿನ ಬಂದೋಬಸ್ತ್‌ ಕಲ್ಪಿಸಲಾಗಿದೆ.

ವಿಷ್ಣುವರ್ಧನ್ ಅವರ ಸಮಾಧಿಯನ್ನು ತೆರವು ಮಾಡಿರುವ ಕ್ರಮಕ್ಕೆ ನಟ ಸುದೀಪ್, ಧ್ರುವ ಸರ್ಜಾ ಸೇರಿದಂತೆ ಅನೇಕರು ಕಲಾವಿದರು ಆಕ್ರೋಶ ವ್ಯಕ್ತಪಡಿಸಿದ್ಧಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಖಿ ಕಟ್ಟದೆಯೇ ದರ್ಶನ್‌ಗೆ ರಕ್ಷಾ ಬಂಧನದ ಶುಭಕೋರಿದ ನಟಿ ಸೋನಲ್ ಮೊಂಥೆರೋ