Select Your Language

Notifications

webdunia
webdunia
webdunia
webdunia

ವೇದಿಕೆಗೆ ನಮಸ್ಕರಿಸಿ, ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ನಟ ರಿಷಬ್ ಶೆಟ್ಟಿ

70th National Film Awards, Actor Rishabh Shetty, National; Best Actor,

Sampriya

ನವದೆಹಲಿ , ಮಂಗಳವಾರ, 8 ಅಕ್ಟೋಬರ್ 2024 (19:08 IST)
Photo Courtesy X
ನವದೆಹಲಿ: 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ  ಸಮಾರಂಭದಲ್ಲಿ ಕಾಂತಾರ ಸಿನಿಮಾದ ಅಭಿನಯಕ್ಕಾಗಿ ನಟ ರಿಷಭ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನೀಡಿದರು.  ಇವರ ಜತೆ ಕನ್ನಡತಿ ನಿತ್ಯಾ ಮೆನನ್ ಅವರು ಕೂಡಾ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ. ಅತ್ಯುತ್ತಮ ಮನರಂಜನಾ ಚಿತ್ರ 'ಕಾಂತಾರ' ಮತ್ತು ಈ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ.

ಅದಷ್ಟೇ ಅಲ್ಲ, ಅತ್ಯುತ್ತಮ ಪ್ರಾದೇಶಿಕ ಸಿನಿಮಾ, ಅತ್ಯುತ್ತಮ ಸಾಹಸ ನಿರ್ದೇಶನ ವಿಭಾಗದಲ್ಲಿ 'ಕೆಜಿಎಫ್ 2'ಗೆ ರಾಷ್ಟ್ರ ಪ್ರಶಸ್ತಿ ದಕ್ಕಿದ್ದು, ಚಿತ್ರದ ನಿರ್ಮಾಣ ಸಂಸ್ಥೆಯ ರೂವಾರಿ ವಿಜಯ್ ಕಿರಗಂದೂರು ಅವರಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ.

'ಮಧ್ಯಂತರ' ಸಿನಿಮಾಗಾಗಿ ಬೆಸ್ಟ್ ಡೆಬ್ಯೂ ನಿರ್ದೇಶಕ ಬಸ್ತಿ ದಿನೇಶ್ ಶೆಣೈ. ಅತ್ಯುತ್ತಮ ಸಂಕಲನಕ್ಕಾಗಿ ಸುರೇಶ್ ಅರಸ್‌ಗೆ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕನ್ನಡದ ನಟಿ ನಿತ್ಯಾ ಮೆನನ್‌ಗೆ 'ತಿರುಚಿತ್ರಂಬಲಂ' ಸಿನಿಮಾದ ನಟನೆಗಾಗಿ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಸಿವಿ ನಾಗೇಶ್‌ ವಾದಕ್ಕೆ ಎಸ್‌ಪಿಪಿ ಪ್ರತಿವಾದ ಹೀಗಿತ್ತು