Webdunia - Bharat's app for daily news and videos

Install App

ವೇದಿಕೆಗೆ ನಮಸ್ಕರಿಸಿ, ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ನಟ ರಿಷಬ್ ಶೆಟ್ಟಿ

Sampriya
ಮಂಗಳವಾರ, 8 ಅಕ್ಟೋಬರ್ 2024 (19:08 IST)
Photo Courtesy X
ನವದೆಹಲಿ: 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ  ಸಮಾರಂಭದಲ್ಲಿ ಕಾಂತಾರ ಸಿನಿಮಾದ ಅಭಿನಯಕ್ಕಾಗಿ ನಟ ರಿಷಭ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನೀಡಿದರು.  ಇವರ ಜತೆ ಕನ್ನಡತಿ ನಿತ್ಯಾ ಮೆನನ್ ಅವರು ಕೂಡಾ ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ. ಅತ್ಯುತ್ತಮ ಮನರಂಜನಾ ಚಿತ್ರ 'ಕಾಂತಾರ' ಮತ್ತು ಈ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ.

ಅದಷ್ಟೇ ಅಲ್ಲ, ಅತ್ಯುತ್ತಮ ಪ್ರಾದೇಶಿಕ ಸಿನಿಮಾ, ಅತ್ಯುತ್ತಮ ಸಾಹಸ ನಿರ್ದೇಶನ ವಿಭಾಗದಲ್ಲಿ 'ಕೆಜಿಎಫ್ 2'ಗೆ ರಾಷ್ಟ್ರ ಪ್ರಶಸ್ತಿ ದಕ್ಕಿದ್ದು, ಚಿತ್ರದ ನಿರ್ಮಾಣ ಸಂಸ್ಥೆಯ ರೂವಾರಿ ವಿಜಯ್ ಕಿರಗಂದೂರು ಅವರಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ.

'ಮಧ್ಯಂತರ' ಸಿನಿಮಾಗಾಗಿ ಬೆಸ್ಟ್ ಡೆಬ್ಯೂ ನಿರ್ದೇಶಕ ಬಸ್ತಿ ದಿನೇಶ್ ಶೆಣೈ. ಅತ್ಯುತ್ತಮ ಸಂಕಲನಕ್ಕಾಗಿ ಸುರೇಶ್ ಅರಸ್‌ಗೆ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕನ್ನಡದ ನಟಿ ನಿತ್ಯಾ ಮೆನನ್‌ಗೆ 'ತಿರುಚಿತ್ರಂಬಲಂ' ಸಿನಿಮಾದ ನಟನೆಗಾಗಿ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments