Select Your Language

Notifications

webdunia
webdunia
webdunia
webdunia

ಹುಟ್ಟುಹಬ್ಬದ ಸಂಭ್ರಮದಲ್ಲಿ ರಿಷಬ್ ಶೆಟ್ಟಿ: ರೋಮ್ಯಾಂಟಿಕ್ ಆಗಿ ವಿಶ್ ಮಾಡಿದ ಪತ್ನಿ ಪ್ರಗತಿ

Rishabh Shetty Birthday

Sampriya

ಬೆಂಗಳೂರು , ಭಾನುವಾರ, 7 ಜುಲೈ 2024 (15:55 IST)
Photo Courtesy X
ಬೆಂಗಳೂರು: ಕಾಂತಾರ ಪ್ರೀಕ್ವೆಲ್ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಇಂದು 41ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಪ್ರಯೋಗಿಕ ಸಿನಿಮಾ ನೀಡುತ್ತಾ ಬಂದಿರುವ ರಿಷಬ್ ಶೆಟ್ಟಿ ಅವರಿಗೆ ಕಾಂತಾರ ಸಿನಿಮಾ ವಿಶ್ವಮನ್ನಣೆಯನ್ನು ತಂದುಕೊಟ್ಟಿತು.

ಇದೀಗ ಕಾಂತಾರ ಪಾರ್ಟ್ 1 ನಲ್ಲಿ ಬ್ಯುಸಿಯಾಗಿರುವ ರಿಷಬ್ ಶೆಟ್ಟಿ ಅದರ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೂ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರಿಗೆ ಪತ್ನಿ ಪ್ರಗತಿ ಶೆಟ್ಟಿ ಅವರು ರೋಮ್ಯಾಂಟಿಕ್ ಆಗಿ ವಿಶ್ ಮಾಡಿದ್ದಾರೆ.

ಅದಲ್ಲದೆ ವಿಡಿಯೋ ತುಣುಕನ್ನು ಹಂಚಿಕೊಂಡು ತಮ್ಮ ಪ್ರೀತಿಯ ಪತಿರಾಯರ ಬಗ್ಗೆ ಕೊಂಡಾಡಿದ್ದಾರೆ. ಇದನ್ನು ನೋಡಿದ ಅವರ ಅಭಿಮಾನಿಗಳು ರಿಷಬ್ ಶೆಟ್ಟಿ ಅವರಿಗೆ ಶುಭಕೋರಿದ್ದಾರೆ.

ನನ್ನ ಜೀವನದ ಆಧಾರಸ್ತಂಭಕ್ಕೆ ಜನ್ಮದಿನದ ಶುಭಾಶಯಗಳು.
ನೀವು ಎಂತಹ ಅದ್ಭುತ ವ್ಯಕ್ತಿ ಎಂದು ನಾನು ಜಗತ್ತಿಗೆ ಹೇಳಲು ಬಯಸುತ್ತೇನೆ.
ನಿಮ್ಮನ್ನು ನಿಜವಾಗಿಯೂ ತಿಳಿದಿರುವವರು ಅದೃಷ್ಟವಂತರು.
ನಿಮ್ಮ ಶಕ್ತಿ, ಬುದ್ಧಿವಂತಿಕೆ ಮತ್ತು ಪ್ರೀತಿ ಪ್ರತಿದಿನ ನಮಗೆಲ್ಲರಿಗೂ ಸ್ಫೂರ್ತಿ ನೀಡುತ್ತದೆ.

ನಾವು ಒಟ್ಟಿಗೆ ಇರುವುದಕ್ಕಾಗಿ ನಾನು ಪ್ರತಿದಿನ ದೇವರಿಗೆ ಕೃತಜ್ಞನಾಗಿದ್ದೇನೆ.
ನಿಮಗೆ ಸಂತೋಷ, ಯಶಸ್ಸು ಮತ್ತು ಪ್ರಪಂಚದ ಎಲ್ಲಾ ಸಂತೋಷದಿಂದ ತುಂಬಿದ ವರ್ಷವನ್ನು ಹಾರೈಸುತ್ತೇನೆ ಎಂದು ರಿಷಬ್ ಶೆಟ್ಟಿ ಜತೆಗಿನ ಜರ್ನಿಯನ್ನು ಬಣ್ಣಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಟೈಟಾನಿಕ್, ಅವತಾರ್ ಸಿನಿಮಾದ ನಿರ್ಮಾಪಕ ಜಾನ್ ಲ್ಯಾಂಡ್ ಇನ್ನಿಲ್ಲ