Select Your Language

Notifications

webdunia
webdunia
webdunia
webdunia

ಕಾಂತಾರ ಸಕ್ಸನ್‌ ಬೆನ್ನಲ್ಲೇ ಬಿಹಾರದ ಪವರ್‌ಫುಲ್‌ ದೇಗುಲಕ್ಕೆ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಭೇಟಿ

Kantara Chapter 1, Divine Star Rishabh Shetty, Maa Mundeshwari Temple, Bihar
Photo Credit X
ಬೆಂಗಳೂರು: ರಿಷಭ್‌ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಚಾಪ್ಟರ್ 1 ಸಿನಿಮಾ ಸೂಪರ್‌ ಹಿಟ್‌ ಆಗಿದೆ. ಬಾಕ್ಸಾಫೀಸ್‌ನಲ್ಲಿ ದಾಖಲೆಯ ಕಲೆಕ್ಷನ್‌ ಮಾಡುತ್ತಿದೆ.

ಸಿನಿಮಾ ಸಕ್ಸಸ್‌ ಬೆನ್ನಲ್ಲೇ ರಿಷಭ್‌ ಶೆಟ್ಟಿ ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ. ಇದೀಗ ಬಿಹಾರದ ಪ್ರಾಚೀನ ಮಾ ಮುಂಡೇಶ್ವರಿ ದೇವಾಲಯಕ್ಕೆ ಹೋಗಿ ಪೂಜೆ ಸಲ್ಲಿಸಿದ್ದಾರೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ.

ಈಚೆಗೆ ರಿಷಭ್‌ ಶೆಟ್ಟಿ ಅವರು ನಾಡಿನ ಪ್ರಸಿದ್ಧ ಹಾಸನಾಂಬ ದೇವಾಲಯಕ್ಕೆ ಕುಟುಂಬ ಸಮೇತ ಭೇಟಿ ನೀಡಿದ್ದರು. ಕೆಲ ದಿನಗಳ ಹಿಂದೆ ನಂಜನಗೂಡಿನ ಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿದ್ದರು. ಕೆಲ ದಿನಗಳ ಹಿಂದೆ ಕಾಶಿ ವಿಶ್ವನಾಥ, ರಾಮೇಶ್ವರ ದೇಗುಲಕ್ಕೆ ಭೇಟಿ ನೀಡಿದ್ದರು.

ಕಾಂತಾರ ಚಾಪ್ಟರ್‌–1 ಚಿತ್ರ ವಿಶ್ವದಾದಂತ್ಯ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಿನಿಮಾದಲ್ಲಿ ಕನಕವತಿಯಾಗಿ ರುಕ್ಮಿಣಿ ವಸಂತ್, ಕುಲಶೇಖರನಾಗಿ ಗುಲ್ಶನ್ ದೇವಯ್ಯ,ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ನಟಿಸಿದ್ದಾರೆ.

ಕಾಂತಾರ ಚಾಪ್ಟರ್‌ 1 ಸಿನಿಮಾ ಬಿಡುಗಡೆಯಾಗಿ ಎರಡನೇ ವಾರದಲ್ಲಿ ₹700 ಕೋಟಿಗೂ ಅಧಿಕ ಗಳಿಕೆ ಮಾಡಿ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿದೆ. ಕೆಜಿಎಫ್‌ 2 ಬಳಿಕ ಕನ್ನಡದಲ್ಲಿ ಹೆಚ್ಚು ಕಲೆಕ್ಷನ್‌ ಮಾಡಿದ ಸಿನಿಮಾ ಇದಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ