ಕಾಂತಾರ ಸಕ್ಸನ್‌ ಬೆನ್ನಲ್ಲೇ ಬಿಹಾರದ ಪವರ್‌ಫುಲ್‌ ದೇಗುಲಕ್ಕೆ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಭೇಟಿ

Sampriya
ಸೋಮವಾರ, 20 ಅಕ್ಟೋಬರ್ 2025 (14:10 IST)
Photo Credit X
ಬೆಂಗಳೂರು: ರಿಷಭ್‌ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಚಾಪ್ಟರ್ 1 ಸಿನಿಮಾ ಸೂಪರ್‌ ಹಿಟ್‌ ಆಗಿದೆ. ಬಾಕ್ಸಾಫೀಸ್‌ನಲ್ಲಿ ದಾಖಲೆಯ ಕಲೆಕ್ಷನ್‌ ಮಾಡುತ್ತಿದೆ.

ಸಿನಿಮಾ ಸಕ್ಸಸ್‌ ಬೆನ್ನಲ್ಲೇ ರಿಷಭ್‌ ಶೆಟ್ಟಿ ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ. ಇದೀಗ ಬಿಹಾರದ ಪ್ರಾಚೀನ ಮಾ ಮುಂಡೇಶ್ವರಿ ದೇವಾಲಯಕ್ಕೆ ಹೋಗಿ ಪೂಜೆ ಸಲ್ಲಿಸಿದ್ದಾರೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ.

ಈಚೆಗೆ ರಿಷಭ್‌ ಶೆಟ್ಟಿ ಅವರು ನಾಡಿನ ಪ್ರಸಿದ್ಧ ಹಾಸನಾಂಬ ದೇವಾಲಯಕ್ಕೆ ಕುಟುಂಬ ಸಮೇತ ಭೇಟಿ ನೀಡಿದ್ದರು. ಕೆಲ ದಿನಗಳ ಹಿಂದೆ ನಂಜನಗೂಡಿನ ಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿದ್ದರು. ಕೆಲ ದಿನಗಳ ಹಿಂದೆ ಕಾಶಿ ವಿಶ್ವನಾಥ, ರಾಮೇಶ್ವರ ದೇಗುಲಕ್ಕೆ ಭೇಟಿ ನೀಡಿದ್ದರು.

ಕಾಂತಾರ ಚಾಪ್ಟರ್‌–1 ಚಿತ್ರ ವಿಶ್ವದಾದಂತ್ಯ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಿನಿಮಾದಲ್ಲಿ ಕನಕವತಿಯಾಗಿ ರುಕ್ಮಿಣಿ ವಸಂತ್, ಕುಲಶೇಖರನಾಗಿ ಗುಲ್ಶನ್ ದೇವಯ್ಯ,ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ನಟಿಸಿದ್ದಾರೆ.

ಕಾಂತಾರ ಚಾಪ್ಟರ್‌ 1 ಸಿನಿಮಾ ಬಿಡುಗಡೆಯಾಗಿ ಎರಡನೇ ವಾರದಲ್ಲಿ ₹700 ಕೋಟಿಗೂ ಅಧಿಕ ಗಳಿಕೆ ಮಾಡಿ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿದೆ. ಕೆಜಿಎಫ್‌ 2 ಬಳಿಕ ಕನ್ನಡದಲ್ಲಿ ಹೆಚ್ಚು ಕಲೆಕ್ಷನ್‌ ಮಾಡಿದ ಸಿನಿಮಾ ಇದಾಗಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಮುಂದಿನ ಸುದ್ದಿ
Show comments