Publish Date: Fri, 24 Jan 2020 (09:05 IST)
Updated Date: Fri, 24 Jan 2020 (09:07 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಚಿತ್ರೀಕರಣ ಮುಗಿಸಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದೆ.
ಸದ್ಯಕ್ಕೆ ನಿರ್ದೇಶಕ ತರುಣ್ ಸುಧೀರ್ ಮತ್ತು ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಮುಂಬೈನಲ್ಲಿ ಸಾಂಗ್ ಕಂಪೋಸಿಂಗ್ ಮಾಡುತ್ತಿದ್ದಾರೆ. ಮುಂಬೈನ ಪ್ರತಿಷ್ಠಿತ ಯಶ್ ರಾಜ್ ಸ್ಟುಡಿಯೋದಲ್ಲಿ ಸಂಗೀತ ಸಂಯೋಜನೆ ನಡೆಯುತ್ತಿದೆ.
ಕಳೆದ ಬಾರಿ ಒಡೆಯ ಸಿನಿಮಾಗೂ ಅರ್ಜುನ್ ಜನ್ಯಾ ಸಂಗೀತ ನೀಡಿದ್ದರು. ಆದರೆ ಹಾಡುಗಳು ಚೆನ್ನಾಗಿರಲಿಲ್ಲ ಎಂಬ ಟೀಕೆ ವ್ಯಕ್ತವಾಗಿತ್ತು. ಈ ಬಾರಿ ಅತ್ಯುತ್ತಮ ಹಾಡುಗಳನ್ನು ನೀಡಲು ಜನ್ಯಾ ಸಾಕಷ್ಟು ಶ್ರಮವಹಿಸುತ್ತಿದ್ದಾರೆ.