ರಾಬರ್ಟ್ ವಿಜಯಯಾತ್ರೆ ರದ್ದುಗೊಳಿಸಿದ ಚಿತ್ರತಂಡ

Webdunia
ಭಾನುವಾರ, 28 ಮಾರ್ಚ್ 2021 (09:07 IST)
ಬೆಂಗಳೂರು: ಎಲ್ಲಾ ಸರಿ ಹೋಗಿದ್ದರೆ ನಾಳೆಯಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ವಿಜಯಯಾತ್ರೆ ನಾಳೆಯಿಂದ ಆರಂಭವಾಗಬೇಕಾಗಿತ್ತು. ಆದರೆ ಅದೀಗ ರದ್ದಾಗಿದೆ.

 
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಚಿತ್ರತಂಡ ರಾಬರ್ಟ್ ವಿಜಯಯಾತ್ರೆಯನ್ನು ರದ್ದುಗೊಳಿಸಿದೆ. ಮಾರ್ಚ್ 29 ರಿಂದ ಏಪ್ರಿಲ್ 1 ರವರೆಗೆ ರಾಜ್ಯದ ವಿವಿಧ ಭಾಗಗಳಿಗೆ ನಾಯಕ ದರ್ಶನ್ ಹಾಗೂ ಚಿತ್ರತಂಡ ಪ್ರವಾಸ ಕೈಗೊಂಡು ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಲು ತೀರ್ಮಾನಿಸಿತ್ತು.

ಆದರೆ ಕೊರೋನಾ ಹಿನ್ನಲೆಯಲ್ಲಿ ವಿಜಯಯಾತ್ರೆ ರದ್ದುಗೊಳಿಸುತ್ತಿರುವುದಾಗಿ ಸ್ವತಃ ದರ್ಶನ್ ಪ್ರಕಟಿಸಿದ್ದಾರೆ. ‘ನೀವು ನಮ್ಮ ಚಿತ್ರಕ್ಕೆ ಅಪಾರ ಬೆಂಬಲವನ್ನು ನೀಡಿ ದೊಡ್ಡಮಟ್ಟದಲ್ಲಿ ಯಶಸ್ವಿಗೊಳಿಸಿದ್ದೀರಿ. ಅದಕ್ಕೆ ವಿಜಯಯಾತ್ರೆ ಮೂಲಕ ನಿಮ್ಮ ಊರಿಗೆ ಬಂದು ಧನ್ಯವಾದ ಹೇಳಲು ಬಯಸಿದ್ದೆವು. ಈ ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಕಾರಣ ಎಲ್ಲೆಡೆ ಹೋಗಲು ಅನುಮತಿ ಸಿಗುವುದು ಕಷ್ಟವಾಗಿದೆ. ನಿಮ್ಮ ಆರೋಗ್ಯವೇ ನಮ್ಮ ಮತ್ತು ಸರ್ಕಾರದ ಮೊದಲ ಆದ್ಯತೆ. ದಯಮಾಡಿ ಮಾಸ್ಕ್ ಧರಿಸಿ ಜಾಗ್ರತೆಯಲ್ಲಿರಿ. ಈಗಿನ ಪರಿಸ್ಥಿತಿ ಸುಧಾರಿಸುತ್ತಿದ್ದಂತೇ ನಾವು ಖಂಡಿತಾ ನಿಮ್ಮ ಊರಿಗೆ ಬರುತ್ತೇವೆ’ ಎಂದು ದರ್ಶನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments