Webdunia - Bharat's app for daily news and videos

Install App

ಕಿಯಾರ ಅಡ್ವಾಣಿಗಾಗಿ ದೊಡ್ಡ ನಿರ್ಧಾರ ತೆಗೆದುಕೊಂಡ ರಾಕಿಂಗ್ ಸ್ಟಾರ್ ಯಶ್

Krishnaveni K
ಶನಿವಾರ, 21 ಜೂನ್ 2025 (14:10 IST)
ಮುಂಬೈ: ರಾಕಿಂಗ್ ಸ್ಟಾರ್ ಯಶ್ ನಾಯಕರಾಗಿರುವ ಟಾಕ್ಸಿಕ್ ಸಿನಿಮಾದಲ್ಲಿ ಬಾಲಿವುಡ್ ನಟಿ ಕಿಯಾರ ಅಡ್ವಾಣಿ ನಾಯಕಿಯಾಗಿರುವುದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಕಿಯಾರಗಾಗಿ ಯಶ್ ದೊಡ್ಡ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಮಲಯಾಳಂ ನಿರ್ದೇಶಕಿ ಗೀತು ಮೋಹನ್ ದಾಸ್ ಆಕ್ಷನ್ ಕಟ್ ಹೇಳುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಟಾಕ್ಸಿಕ್. ಈ ಸಿನಿಮಾ ಕೆಜಿಎಫ್ 2 ಬಳಿಕ ಯಶ್ ನಟಿಸುತ್ತಿರುವ ಸಿನಿಮಾವಾಗಿದೆ. ಬಹುಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ದೊಡ್ಡ ತಾರಾಗಣವೇ ಸಿನಿಮಾದಲ್ಲಿದೆ.

ಈ ನಡುವೆ ಟಾಕ್ಸಿಕ್ ಚಿತ್ರೀಕರಣ ಹಂತದಲ್ಲಿರುವಾಗಲೇ ನಾಯಕಿ ಕಿಯಾರ ಅಡ್ವಾಣಿ ಗರ್ಭಿಣಿಯಾಗಿದ್ದಾರೆ. ಇದರಿಂದಾಗಿ ಚಿತ್ರತಂಡ ಅವರನ್ನು ಎಚ್ಚರಿಕೆಯಿಂದ ನೋಡಿಕೊಳ್ಳುತ್ತಿದೆ. ಎಷ್ಟರಮಟ್ಟಿಗೆ ಎಂದರೆ ಕಿಯಾರಗಾಗಿ ನಟ ಯಶ್ ಚಿತ್ರತಂಡದ ಬಳಿ ಮನವಿ ಮಾಡಿ ಚಿತ್ರೀಕರಣವನ್ನೇ ಮುಂಬೈಗೆ ಶಿಫ್ಟ್ ಮಾಡಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಬೆಂಗಳೂರಿನಲ್ಲಿ ನಡೆಯಬೇಕಿದ್ದ ಚಿತ್ರೀಕರಣವನ್ನೂ ಯಶ್ ಮುಂಬೈಗೆ ಸ್ಥಳಾಂತರಿಸಿದ್ದಾರೆ ಎನ್ನಲಾಗುತ್ತಿದೆ. ಗರ್ಭಿಣಿ ಕಿಯಾರಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಯಶ್ ದೊಡ್ಡ ನಿರ್ಧಾರ ಕೈಗೊಂಡಿದ್ದಾರೆ ಎಂದು ಸುದ್ದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಮ್ಯಾಗೆ ಅಶ್ಲೀಲ ಮೆಸೇಜ್‌, ಜೀವಬೆದರಿಕೆ ಪ್ರಕರಣ: ತನಿಖೆಯಲ್ಲಿ ಭಾರೀ ಬೆಳವಣಿಗೆ

ಬಾಲಿವುಡ್ ನಟ ಗುಲ್ಶನ್ ದೇವಯ್ಯ ಫಸ್ಟ್ ಲುಕ್ ಬಿಡುಗಡೆ ಮಾಡಿದ ಕಾಂತಾರ ತಂಡ

ಸಾಹಸಸಿಂಹ ವಿಷ್ಣುವರ್ದನ್ ಸ್ಮಾರಕಕ್ಕಾಗಿ ಕಿಚ್ಚ ಸುದೀಪ್ ಜಾಗ ಖರೀದಿ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

ಮುಂದಿನ ಸುದ್ದಿ
Show comments