Webdunia - Bharat's app for daily news and videos

Install App

ಬಾಲಿವುಡ್ ರಾಮಾಯಣ ಟೀಂ ಸೇರಿಕೊಂಡ ಯಶ್: ಬಾಲಿವುಡ್ ನಲ್ಲಿ ಯಶ್ ಡಬಲ್ ಧಮಾಕ

Krishnaveni K
ಶುಕ್ರವಾರ, 12 ಏಪ್ರಿಲ್ 2024 (12:27 IST)
Photo Courtesy: Twitter
ಮುಂಬೈ: ರಾಕಿಂಗ್ ಸ್ಟಾರ್ ಯಶ್ ಬಾಲಿವುಡ್ ನಲ್ಲಿ ನಿರ್ಮಾಣವಾಗುತ್ತಿರುವ ರಾಮಾಯಣ ಸಿನಿಮಾದಲ್ಲಿ ರಾವಣನ ಪಾತ್ರ ಮಾಡಲಿದ್ದಾರೆ ಎಂದು ಹಲವು ದಿನಗಳಿಂದ ಸುದ್ದಿಯಾಗಿತ್ತು. ಆ ಸುದ್ದಿಗಳಿಗೆ ಈಗ ಸ್ಪಷ್ಟನೆ ಸಿಕ್ಕಿದೆ.

ಯಶ್ ರಾಮಾಯಣ ಸಿನಿಮಾ ತಂಡ ಸೇರಿಕೊಂಡಿರುವುದು ನಿಜ. ಆದರೆ ಕೇವಲ ನಟನಾಗಿ ಅಲ್ಲ, ನಿರ್ಮಾಪಕನಾಗಿಯೂ ಕೂಡಾ. ಹೌದು, ಬಾಲಿವುಡ್ ನಲ್ಲಿ ನಿತೀಶ್ ತಿವಾರಿ ನಿರ್ದೇಶಿಸುತ್ತಿರುವ ರಾಮಾಯಣ ಸಿನಿಮಾಗೆ ನಮಿತ್ ಮಲ್ಹೋತ್ರಾ ಬಂಡವಾಳ ಹೂಡುತ್ತಿದ್ದು ಅವರಿಗೆ ಯಶ್ ಕೂಡಾ ಸಾಥ್ ಕೊಡುತ್ತಿದ್ದಾರೆ.

ಯಶ್ ಒಡೆತನದ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಸಂಸ್ಥೆ ರಾಮಾಯಣ ಸಿನಿಮಾಗೆ ಬಂಡವಾಳ ಹಾಕುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಯಶ್ ಭಾರತೀಯ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಪ್ರದರ್ಶಿಸುವುದು ನನ್ನ ಕನಸು. ಅದರ ನಿಟ್ಟಿನಲ್ಲಿ ನಾನು ಅತ್ಯುತ್ತಮ ವಿಎಫ್ ಸಿ ಸ್ಟುಡಿಯೋ ಕಂಡುಕೊಂಡಿದ್ದೇನೆ. ಹೀಗೆ ಮಾತನಾಡುತ್ತಿದ್ದಾಗ ರಾಮಾಯಣ ಕತೆ ಚರ್ಚೆಯಾಯಿತು.  ಭಾರತೀಯ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸುವ ಪ್ರಯತ್ನ ಇದಾಗಿದ್ದು, ಈ ಮಹಾಕಾವ್ಯವನ್ನು ಸಿನಿಮಾವಾಗಿ ಹೊರತರುತ್ತಿದ್ದೇವೆ ಎಂದಿದ್ದಾರೆ.

ರಾಮಾಯಣ ಸಿನಿಮಾದಲ್ಲಿ ಬಾಲಿವುಡ್ ನಟ ರಣಬೀರ್ ಕಪೂರ್ ಶ್ರೀರಾಮನ ಪಾತ್ರ ಮಾಡುತ್ತಿದ್ದಾರೆ. ಅದಕ್ಕೆ ಅವರು ಈಗಾಗಲೇ ವರ್ಕೌಟ್ ಮಾಡಿ ರೆಡಿ ಆಗುತ್ತಿದ್ದಾರೆ. ರಣಬೀರ್ ಕಪೂರ್ ಗೆ ಜೋಡಿಯಾಗಿ ಸೀತೆಯ ಪಾತ್ರವನ್ನು ಸಾಯಿ ಪಲ್ಲವಿ ನಿರ್ವಹಿಸಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments