ರಾಕಿಂಗ್ ಸ್ಟಾರ್ ಯಶ್ ಬೆಂಗಾವಲು ಪಡೆಯ ಅವಾಂತರ: ಯುವಕನ ಕಾಲ ಮೇಲೆ ಹರಿದ ಕಾರು

Krishnaveni K
ಗುರುವಾರ, 29 ಫೆಬ್ರವರಿ 2024 (15:08 IST)
ಬಳ್ಳಾರಿ: ಇಂದು ಬಳ್ಳಾರಿಯ ಅಮೃತೇಶ್ವರ ದೇವಾಲಯದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಬಂದಿದ್ದ ರಾಕಿಂಗ್ ಸ್ಟಾರ್  ಯಶ್ ಅವರ ಬೆಂಗಾವಲು ಪಡೆಯ ವಾಹನ ಅಭಿಮಾನಿ ಯುವಕನ ಕಾಲ ಮೇಲೆ ಹರಿದಿದೆ.

ಯಶ್ ಬರುತ್ತಾರೆಂದರೆ ಅಲ್ಲಿ ಅಭಿಮಾನಿಗಳ ಸಾಗರವೇ ಸೇರುತ್ತದೆ. ಇಂದೂ ಕೂಡಾ ರಾಕಿ ಭಾಯಿ ಬರುವ ಸುದ್ದಿ ತಿಳಿದು ದೇವಾಲಯದ ಬಳಿ ಸಾಕಷ್ಟು ಸಂಖ್ಯೆಯಲ್ಲಿ ಜನ ಸೇರಿದ್ದರು. ಅವರನ್ನು ನೋಡಲೆಂದು ಅವರ ಜೊತೆ ಸೆಲ್ಫೀ ತೆಗೆದುಕೊಳ್ಳಲೆಂದು ಜನ ನುಗ್ಗಿ ಬಂದಿದ್ದಾರೆ.

ಯಶ್ ಕಾರು ಬರುತ್ತಿದ್ದಂತೇ ಅವರ ಕಾರಿಗೇ ಜನ ಮುತ್ತಿಗೆ ಹಾಕಿದ್ದಾರೆ. ಈ ವೇಳೆ ದುರ್ಘಟನೆ ನಡೆದಿದೆ. ಯಶ್ ಕಾರನ್ನು ಬೆನ್ನು ಹತ್ತಿದ್ದ ಯುವಕನೊಬ್ಬನ ಮೇಲೆ ಬೆಂಗಾವಲು ಪಡೆಯ ವಾಹನ ಹರಿದಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗಾಯ ಗಂಭೀರವಲ್ಲ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಯಶ್ ಬರ್ತ್ ಡೇ ದಿನ ಇಬ್ಬರು ಯುವಕರು ಬ್ಯಾನರ್ ಕಟ್ಟಲು ಹೋಗಿ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದರು. ಅವರನ್ನು ನೋಡಲು ಯಶ್ ಬಂದಾಗ ಅವರ ಬೆಂಗಾವಲು ಪಡೆಯ ವಾಹನಕ್ಕೆ ದ್ವಿಚಕ್ರ ವಾಹನ ಢಿಕ್ಕಿಯಾಗಿ ಮತ್ತೊಬ್ಬ ಅಭಿಮಾನಿ ಸಾವನ್ನಪ್ಪಿದ್ದ. ಇದೀಗ ಮತ್ತೊಂದು ದುರ್ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments