Publish Date: Tue, 16 Aug 2022 (08:10 IST)
Updated Date: Tue, 16 Aug 2022 (08:56 IST)
ಬೆಂಗಳೂರು: ಕೆಜಿಎಫ್ 2 ಬಳಿಕ ರಾಕಿಂಗ್ ಸ್ಟಾರ್ ಯಶ್ ಹೊಸ ಸಿನಿಮಾ ಯಾವುದು ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಯಶ್ ಘೋಷಣೆಗಾಗಿ ಅಭಿಮಾನಿಗಳು ಕಾದಿದ್ದಾರೆ.
ಆದರೆ ಇದುವರೆಗೆ ರಾಕಿಂಗ್ ಸ್ಟಾರ್ ಯಶ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಗುಟ್ಟುಬಿಟ್ಟುಕೊಟ್ಟಿಲ್ಲ. ಇತ್ತೀಚೆಗೆ ಮೈಸೂರಿನಲ್ಲಿ ಈ ಬಗ್ಗೆ ಪ್ರಶ್ನಿಸಿದಾಗ ಕಾದು ನೋಡಿ ಎಂದಷ್ಟೇ ಹೇಳಿದ್ದರು.
ಮೂಲಗಳ ಪ್ರಕಾರ ಯಶ್ ಈಗಾಗಲೇ ಮುಫ್ತಿ ನಿರ್ದೇಶಕ ನರ್ತನ್, ಕೆಜಿಎಫ್ 3, ಶಂಕರ್ ನಿರ್ದೇಶನದಲ್ಲಿ ಸಿನಿಮಾ ಒಪ್ಪಿಕೊಂಡಿದ್ದಾರೆ. ಅದಲ್ಲದೆ, ಇದೀಗ ನಾಲ್ಕನೇ ಸಿನಿಮಾಗೆ ಸಹಿ ಹಾಕಿದ ಸುದ್ದಿ ಕೇಳಿಬರುತ್ತಿದೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಹೊಸ ಸಿನಿಮಾಗೆ ಯಶ್ ಒಪ್ಪಿಗೆ ನೀಡಿದ್ದಾರೆ ಎಂಬ ಸುದ್ದಿಯಿದೆ. ಆದರೆ ಈ ಪೈಕಿ ಯಾವುದರಲ್ಲಿ ಯಶ್ ಮೊದಲು ನಟಿಸಲಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.