ದಾದಾ ಸಾಹೇಬ್ ಪ್ರಶಸ್ತಿ ಸ್ವೀಕರಿಸಿದ ರಾಕಿಂಗ್ ಸ್ಟಾರ್ ಯಶ್

ಶನಿವಾರ, 21 ಸೆಪ್ಟಂಬರ್ 2019 (09:25 IST)
ಬೆಂಗಳೂರು: ಕೆಜಿಎಫ್ ಚಿತ್ರದ ಅದ್ಭುತ ನಟನೆಗಾಗಿ ರಾಕಿಂಗ್ ಸ್ಟಾರ್ ಯಶ್ ಗೆ ದಾದಾ ಸಾಹೇಬ್ ಫಾಲ್ಕೆ ಸೌತ್ 2019 ಪ್ರಶಸ್ತಿ ನೀಡಿ ಗೌರವಿಸಲಾಗಿದೆ.


ಹೈದರಾಬಾದ್ ನಲ್ಲಿ ನಿನ್ನೆ ನಡೆದ ವರ್ಣರಂಜಿತ ಸಮಾರಂಭದಲ್ಲಿ ಯಶ್ ಪ್ರಶಸ್ತಿ ಸ್ವೀಕರಿಸಿದರು. ಕೆಜಿಎಫ್ ಚಿತ್ರದ ಮೂಲಕ ನ್ಯಾಷನಲ್ ಸ್ಟಾರ್ ಆದ ಯಶ್ ರನ್ನು ಈ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.

ಈ ವೇಳೆ ರಾಕಿಂಗ್ ಸ್ಟಾರ್ ಕೆಜಿಎಫ್ ಚಿತ್ರದ ಡೈಲಾಗ್ ಹೇಳಿ ನೆರೆದವರನ್ನು ರಂಜಿಸಿದರು. ಯಶ್ ಸಭಾಂಗಣಕ್ಕೆ ಬರುತ್ತಿದ್ದಂತೇ ಅಭಿಮಾನಿಗಳು ರಾಕಿ ಬಾಯ್ ಎಂದು ಕೂಗಿ ಕರೆದು ತಮ್ಮ ಅಭಿಮಾನ ತೋರ್ಪಡಿಸಿದ್ದು ವಿಶೇಷವಾಗಿತ್ತು.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಸದ್ಯದಲ್ಲೇ ಯೂಟ್ಯೂಬ್ ಚಾನೆಲ್ ಶುರು ಮಾಡ್ತಾರಂತೆ ನವರಸನಾಯಕ ಜಗ್ಗೇಶ್