ಬೆಂಗಳೂರು: ಕೆಜಿಎಫ್ 2 ಸಿನಿಮಾಗೆ ಸಿಗುತ್ತಿರುವ ಭರ್ಜರಿ ಯಶಸ್ಸಿಗೆ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಕಟಿಸುವ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.
ಹಾಗಿದ್ದರೂ ರಾಕಿ ಭಾಯಿ ಯಶ್ ಅಭಿಮಾನಿಗಳಿಂದ ಟ್ರೋಲ್ ಗೊಳಗಾಗಿದ್ದಾರೆ. ಕೆಜಿಎಫ್ 2 ಯಶಸ್ಸಿಗೆ ಎಷ್ಟು ದೊಡ್ಡ ಥ್ಯಾಂಕ್ಸ್ ಹೇಳಿದರೂ ಅದು ಕಡಿಮೆಯೇ ಎಂದು ಯಶ್ ವಿಡಿಯೋದಲ್ಲಿ ಹೇಳಿದ್ದರು.
ಆದರೆ ಈ ವಿಡಿಯೋದಲ್ಲಿ ಅವರು ಇಂಗ್ಲಿಷ್ ನಲ್ಲಿ ಮಾತನಾಡಿದ್ದು ಕೆಲವರ ಕೆಂಗಣ್ಣಿಗೆ ಗುರಿಯಾಗಿದೆ. ಕನ್ನಡ ಮರೆತರು ಎಂದು ಮತ್ತೆ ಯಶ್ ಟ್ರೋಲ್ ಆಗಿದ್ದಾರೆ. ಆದರೆ ಯಶ್ ಈಗ ನ್ಯಾಷನಲ್ ಸ್ಟಾರ್ ಆಗಿರುವುದರಿಂದ ಅವರಿಗೆ ಬೇರೆ ಭಾಷೆಯಲ್ಲೂ ಅಭಿಮಾನಿಗಳಿದ್ದಾರೆ. ಹೀಗಾಗಿ ಎಲ್ಲರಿಗೂ ಅರ್ಥವಾಗಲೆಂದು ಇಂಗ್ಲಿಷ್ ನಲ್ಲಿ ಮಾತನಾಡಿದ್ದಾರೆ ಎಂದು ಯಶ್ ಪರವಾಗಿಯೂ ಕೆಲವು ಅಭಿಮಾನಿಗಳು ಸಮರ್ಥಿಸಿಕೊಂಡಿದ್ದಾರೆ.