Webdunia - Bharat's app for daily news and videos

Install App

ಕೆಜಿಎಫ್ ಬಳಿಕ ಕನ್ನಡವನ್ನೇ ಮರೆತರೇ ಯಶ್? ಟ್ರೋಲ್ ಆದ ನಟ

Webdunia
ಭಾನುವಾರ, 9 ಜನವರಿ 2022 (16:59 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಿನ್ನೆ ತಮ್ಮ ಜನ್ಮದಿನಕ್ಕೆ ಶುಭ ಕೋರಿದವರಿಗೆ ಇಂಗ್ಲಿಷ್ ಭಾಷೆಯಲ್ಲಿ ಧನ್ಯವಾದ ಸಲ್ಲಿಸಿ ಟ್ವೀಟ್ ಒಂದನ್ನು ಮಾಡಿದ್ದರು.

ಆದರೆ ಯಶ್ ಈ ಟ್ವೀಟ್ ಈಗ ಸಾಕಷ್ಟು ಟ್ರೋಲ್ ಗೊಳಗಾಗಿದೆ. ಇತ್ತೀಚೆಗೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿರುದ್ಧವೂ ಯಶ್ ಹೇಳಿಕೆ ಕೊಟ್ಟಿರಲಿಲ್ಲ. ಹೀಗಾಗಿ ಈ ಇಂಗ್ಲಿಷ್ ಭಾಷೆಯ ಟ್ವೀಟ್ ಕೆಲವರ ಕೆಂಗಣ್ಣಿಗೆ ಗುರಿಯಾಗಿದೆ.

ಕೆಜಿಎಫ್ ಸಿನಿಮಾ ಬರುವುದಕ್ಕಿಂತ ಮೊದಲು ಯಶ್, ಕನ್ನಡದಲ್ಲೇ ಟ್ವೀಟ್ ಮಾಡುತ್ತಿದ್ದರು, ರಾಜ್, ವಿಷ್ಣು, ಅಂಬಿ ಎಲ್ಲರ ಹುಟ್ಟುಹಬ್ಬಕ್ಕೂ ತಪ್ಪದೇ ಸಂದೇಶ ಬರೆಯುತ್ತಿದ್ದರು. ಆದರೆ ಇತ್ತೀಚೆಗೆ ಅವರ ಬಗ್ಗೆ ಟ್ವೀಟ್ ಮಾಡಲ್ಲ. ಕನ್ನಡದ ಬಗ್ಗೆ ಮಾತೇ ಆಡಲ್ಲ. ಇಂಗ್ಲಿಷ್ ಭಾಷೆಯಲ್ಲೇ ಟ್ವೀಟ್ ಮಾಡ್ತಾರೆ. ಹಾಗಿದ್ರೆ ಕೆಜಿಎಫ್ ಬಂದ ಮೇಲೆ ಕನ್ನಡವನ್ನು ಮರೆತೇ ಬಿಟ್ಟರಾ ಎಂದು ಕೆಲವರು ಟ್ರೋಲ್ ಮಾಡಿದ್ದಾರೆ.

ಇದಕ್ಕೆ ಯಶ್ ಅಭಿಮಾನಿಗಳು ತಿರುಗೇಟು ನೀಡಿದ್ದು, ಕೆಜಿಎಫ್ ಬಂದ ಮೇಲೆ ರಾಕಿಂಗ್ ಸ್ಟಾರ್ ಗೆ ಪರ ಭಾಷೆಗಳಲ್ಲೂ ಅಭಿಮಾನಿಗಳಿದ್ದಾರೆ. ಅವರೆಲ್ಲರಿಗೂ ಅರ್ಥವಾಗಲಿ ಎಂದು ಇಂಗ್ಲಿಷ್ ನಲ್ಲಿ ಟ್ವೀಟ್ ಮಾಡುತ್ತಾರಷ್ಟೇ ಎಂದು ಸಮರ್ಥಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ರಾಧಿಕಾ ಪಂಡಿತ್ ಕೂಡಾ ಇಂಗ್ಲಿಷ್ ನಲ್ಲಿ ಸಂದೇಶ ಬರೆಯುವುದಕ್ಕೆ ಟ್ರೋಲ್ ಗೊಳಗಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಮ್ಮನೇ ಬಿಡುವ ಮಾತೇ ಇಲ್ಲ: ದರ್ಶನ್ 43 ಅಭಿಮಾನಿಗಳಿಗಾಗಿ ಹುಡುಕಾಟ

ರಮ್ಯಾಗೆ ಫ್ಯಾನ್ಸ್ ಅಶ್ಲೀಲ ಮೆಸೇಜ್ ನಿಂದ ಸಂಕಷ್ಟಕ್ಕೆ ಸಿಲುಕುತ್ತಾರಾ ದರ್ಶನ್

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments