Publish Date: Sun, 15 May 2022 (09:08 IST)
Updated Date: Sun, 15 May 2022 (09:09 IST)
ಹೈದರಾಬಾದ್: ಭಾರತೀಯ ಸಿನಿಮಾ ರಂಗದಲ್ಲಿ ಸಂಚಲನ ಸೃಷ್ಟಿಸಿದ್ದ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾ ಈಗ ಒಟಿಟಿ ರಿಲೀಸ್ ಗೆ ರೆಡಿಯಾಗಿದೆ.
ಥಿಯೇಟರ್ ನಲ್ಲಿ ಬಿಡುಗಡೆಯಾಗಿ 1000 ಕೋಟಿ ರೂ. ಗಳಿಕೆ ಮಾಡಿದ್ದ ಆರ್ ಆರ್ ಆರ್ ಸಿನಿಮಾ ಈಗ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಮೇ 20 ರಿಂದ ಒಟಿಟಿಯಲ್ಲಿ ಸಿನಿಮಾ ವೀಕ್ಷಿಸಬಹುದು.
ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಸೇರಿದಂತೆ ಎಲ್ಲಾ ಭಾಷೆಗಳಲ್ಲಿ ಮೇ 20 ರಿಂದ ಜೀ5 ನಲ್ಲಿ ಆರ್ ಆರ್ ಆರ್ ಸಿನಿಮಾ ಪ್ರಸಾರವಾಗಲಿದೆ.